Dailyhunt Logo
  • Light mode
    Follow system
    Dark mode
    • Play Story
    • App Story
CASTE CENSUS: ಜಾತಿ ಜನಗಣತಿಗೆ ಗೈರು- ಇಬ್ಬರು ಶಿಕ್ಷಕರು ಸಸ್ಪೆಂಡ್

CASTE CENSUS: ಜಾತಿ ಜನಗಣತಿಗೆ ಗೈರು- ಇಬ್ಬರು ಶಿಕ್ಷಕರು ಸಸ್ಪೆಂಡ್

Navasamaja.com 1 year ago

ಬಳ್ಳಾರಿ: ರಾಜ್ಯದಲ್ಲಿ ಜಾತಿ ಜನಗಣತಿ (Caste Census) ಎಂದೇ ಕರೆಯಲಾಗುತ್ತಿರುವ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (Survey) ಭರದಿಂದ ಸಾಗುತ್ತಿದೆ. ಈ ನಡುವೆ ಕೆಲ ಸಮೀಕ್ಷಕರು ಕಳ್ಳತನದ ಕೆಲಸ ಮಾಡಿ ಸಿಕ್ಕಿಹಾಕಿಕೊಂಡಿದ್ದಾರೆ.

ಬಳ್ಳಾರಿ ಜಿಲ್ಲೆಯಲ್ಲಿ ಜಾತಿ ಜನಗಣತಿಗೆ ಗೈರಾದ ಇಬ್ಬರು ಶಿಕ್ಷಕರನ್ನು ಸಸ್ಪೆಂಡ್‌ (Suspend) ಮಾಡಲಾಗಿದೆ.

ರಾಜ್ಯದಲ್ಲಿ ಜಾತಿ ಜನಗಣತಿ ಈಗಾಗಲೇ ಅಂತ್ಯವಾಗಬೇಕಿತ್ತು. ಆದರೆ ಸಮೀಕ್ಷೆ ಮುಗಿಯದ ಹಿನ್ನೆಲೆ ಅಕ್ಟೋಬರ್ 19 ರವರೆಗೆ ಸಮೀಕ್ಷೆ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಆದರೂ ಕೆಲ ಸಮೀಕ್ಷರು ಕಳ್ಳ ದಾರಿ ಹಿಡಿದು ಸಮೀಕ್ಷೆಗೆ ಗೈರಾಗಿರುವುದು ಬೆಳಕಿಗೆ ಬಂದಿದೆ.

ಇದೀಗ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗೈರು ಹಿನ್ನೆಲೆಯಲ್ಲಿ ಬಳ್ಳಾರಿಯಲ್ಲಿ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಅ.18ರವರೆಗೆ ಸಮೀಕ್ಷೆಗೆ ಡೆಡ್​​​​​ಲೈನ್.. ದಸರಾ ರಜೆಯೂ ವಿಸ್ತರಣೆ ಮಾಡಿದ ಸರ್ಕಾರ
ರಾಜ್ಯ ಸರ್ಕಾರದಿಂದ ನಡೆಸಲಾಗುತ್ತಿರುವ ಸಾಮಾಜಿಕ ಆರ್ಥಿಕ ಸಮೀಕ್ಷೆಗೆ (ಜಾತಿಗಣತಿ) ಪೂರ್ವ ನಿಗದಿಯಂತೆ ಸರ್ವೇ ಕಾರ್ಯ ಮುಗಿಯಬೇಕಿತ್ತು. ಆದರೆ ಸಮೀಕ್ಷೆ ಇನ್ನೂ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮೀಕ್ಷೆ ಕೈಗೊಳ್ಳುವ ಅವಧಿಯನ್ನು ವಿಸ್ತರಿಸಿದ್ದು, ಈ ನಿಟ್ಟಿನಲ್ಲಿ ಅ.18ರವರೆಗೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ದಸರಾ ರಜೆಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ತಿಳಿಸಿದರು.

ಸಮೀಕ್ಷೆದಾರರ ಬೇಡಿಕೆಯಂತೆ ಸಮೀಕ್ಷೆಯ ಅವಧಿ ವಿಸ್ತರಣೆ ಹಾಗೂ ಶಾಲೆಗಳ ರಜಾ ದಿನಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ವಿಧಾನಸೌಧದಲ್ಲಿ ಕೆಲ ದಿನಗಳ ಹಿಂದೆ ನಡೆದ ಸಭೆ ಬಳಿಕ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸಿಎಂ ಮಾಹಿತಿ ನೀಡಿದರು. ಅ.19ರೊಳಗೆ ಸರ್ವೇ ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ ಸಿಎಂ ಅವರು, ಯಾರು ಉದ್ದೇಶಪೂರ್ವಕವಾಗಿ ಸಮೀಕ್ಷೆಯಿಂದ ತಪ್ಪಿಸಿಕೊಳ್ಳುತ್ತಾರೋ ಅಂತವರ ವಿರುದ್ಧ ಸರ್ಕಾರ ಶಿಸ್ತುಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಇದೇ ವೇಳೆ ಎಚ್ಚರಿಕೆ ನೀಡಿದರು. ಒಂದು ದಿನಕ್ಕೆ ಕನಿಷ್ಠ 10 ರಿಂದ 15 ಮನೆಗಳ ಸಮೀಕ್ಷೆ ಮುಗಿಸಬೇಕು. ಸರ್ಕಾರಿ ಮತ್ತು ಅನುದಾನಿತ ಎಲ್ಲಾ ಶಾಲೆಗಳಿಗೆ ದಸರಾ ರಸ್ತೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಲಾಗಿದೆ ಎಂದರು.

ದ್ವಿತೀಯ ಪಿಯುಸಿ ಮಿಡ್​​​ ಟರ್ಮ್ ಪರೀಕ್ಷೆಯ ಕರ್ತವ್ಯದಲ್ಲಿ ತೊಡಗಿಕೊಂಡಿರುವ ಶಿಕ್ಷಕ್ಷರು ಸಮೀಕ್ಷೆಯಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ಹೇಳಿದರು. ಇನ್ನು 1 ಲಕ್ಷದ 20 ಸಾವಿರ ಶಿಕ್ಷಕರು ಸಮೀಕ್ಷೆಯಲ್ಲಿ ಭಾಗಿಯಾದರೆ, ಇತರರು 40 ಸಾವಿರ ಸಿಬ್ಬಂದಿ ಭಾಗವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

Dailyhunt
Disclaimer: This content has not been generated, created or edited by Dailyhunt. Publisher: Navasamaja