Dailyhunt
ರೆಮಿಡಿಸಿವಿರ್‌ ಮರುಹಂಚಿಕೆ : ರಾಜ್ಯಕ್ಕೆ 1.22 ಲಕ್ಷ ವಯಲ್‌

ರೆಮಿಡಿಸಿವಿರ್‌ ಮರುಹಂಚಿಕೆ : ರಾಜ್ಯಕ್ಕೆ 1.22 ಲಕ್ಷ ವಯಲ್‌

ಬೆಂಗಳೂರು : ಕೊರೊನಾ ಹಿನ್ನೆಲೆಯಲ್ಲಿ ದೇಶದ ವಿವಿಧ ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ಶನಿವಾರ ರೆಮಿಡಿಸಿವಿರ್‌ ಮರು ಹಂಚಿಕೆ ಮಾಡಿದ್ದೇವೆ. ಕರ್ನಾಟಕದ ಪಾಲು 1.22 ಲಕ್ಷ ವಯಲ್‌ಗ‌ಳಿಗೆ ಏರಿಕೆಯಾಗಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ.

ನಾನು ನಿರ್ವಹಿಸುವ ಔಷಧ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಉನ್ನತಾಧಿಕಾರದ ಸಮಿತಿಯು ಈ ನಿರ್ಣಯ ಕೈಗೊಂಡಿದೆ ಎಂದು ಡಿವಿಎಸ್‌ ಟ್ವೀಟ್‌ ಮಾಡಿದ್ದಾರೆ.

ಕೊರೊನಾ ವಿರುದ್ಧದ ಹೋರಾಟದಲ್ಲಿ ರಾಜ್ಯಕ್ಕೆ ನಾವು ಸಂಪೂರ್ಣ ಸಹಕಾರ, ನೆರವು ನೀಡುತ್ತೇವೆ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :ಸೋಂಕಿನಿಂದ ಬಳಲುತ್ತಿರುವವರ ಜೀವ ಉಳಿಸಲು ಪ್ಲಾಸ್ಮಾ ದಾನ ಮಾಡಿ : ಸಚಿನ್‌ ಮನವಿ

Dailyhunt
Disclaimer: This content has not been generated, created or edited by Dailyhunt. Publisher: Udayavani