ಚಿಕ್ಕಮಗಳೂರು,: ಕಳಸ ತಾಲೂಕಿನ ಬೈನೇಕಾಡು ಹೋಮ್‌ಸ್ಟೇ ಬಳಿ ಬೈಕ್‌ಗೆ ಸೈಡ್ ಕೊಡಲು ಹೋಗಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾದ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ವ್ಯಾಗನರ್ ಕಾರು ಹೊರನಾಡಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದಾಗ ಎದುರಿನಿಂದ ಬಂದ ಬೈಕ್‌ಗೆ ಸೈಡ್ ಕೊಡಲು ಚಾಲಕ ಯತ್ನಿಸಿದ್ದಾನೆ.
ಈ ವೇಳೆ ನಿರಂತರ ಮಳೆಯಿಂದ ನೆನೆದಿದ್ದ ರಸ್ತೆ ಬದಿಗೆ ಕಾರು ಇಳಿದಿದ್ದು, ಕ್ಷಣಾರ್ಧದಲ್ಲೇ ಸ್ಕಿಡ್ ಆಗಿ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ.
ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಮಳೆಗಾಲದಲ್ಲಿ ರಸ್ತೆ ಬದಿಗಳು ಜಾರುವ ಸ್ಥಿತಿಯಲ್ಲಿ ಇರುವುದರಿಂದ ವಾಹನ ಚಾಲಕರು ಹೆಚ್ಚು ಎಚ್ಚರಿಕೆಯಿಂದ ಚಾಲನೆ ಮಾಡಬೇಕು ಎಂದು ಪೊಲೀಸರು ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಮನವಿ ಮಾಡಿದ್ದಾರೆ.

