Dailyhunt Logo
  • Light mode
    Follow system
    Dark mode
    • Play Story
    • App Story
ಬೆಂಗಳೂರಿನಲ್ಲಿ ದಾರುಣ ಘಟನೆ: ಅವಳಿ ಹೆಣ್ಣು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ..!

ಬೆಂಗಳೂರಿನಲ್ಲಿ ದಾರುಣ ಘಟನೆ: ಅವಳಿ ಹೆಣ್ಣು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಾಯಿ..!

AIN Kannada 1 week ago

ಬೆಂಗಳೂರು: ಅವಳಿ ಹೆಣ್ಣು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ತಲಘಟ್ಟಪುರ ಠಾಣಾ ವ್ಯಾಪ್ತಿಯ ವಾಜರಹಳ್ಳಿಯಲ್ಲಿ ನಡೆದಿದೆ.

ಉಮಾದೇವಿ (42) ಎಂಬ ಮಹಿಳೆ ತನ್ನ ಅವಳಿ ಹೆಣ್ಣು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.

IVF ಮೂಲಕ ದಂಪತಿ ಮಕ್ಕಳನ್ನು ಪಡೆದಿದ್ದರು. ಆದರೆ ಹೆರಿಗೆ ಬಳಿಕ ಉಮಾದೇವಿ ಮಾನಸಿಕವಾಗಿ ಅಸ್ವಸ್ಥರಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಸಂಜೆ ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಮನೆಗೆ ಬಂದ ಪತಿ, ಪತ್ನಿಯನ್ನು ರಕ್ಷಿಸಿದ್ದಾರೆ. ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ತಲಘಟ್ಟಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಕ್ಕಳ ಸಾವಿನ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಹೆಚ್ಚಿನ ವಿವರಗಳನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ದ ಉಮಾದೇವಿ ಅವರನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪತಿಯ ದೂರಿನ ಆಧಾರದ ಮೇಲೆ ತಲಘಟ್ಟಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News