ಬೆಂಗಳೂರು: ನಗರದಲ್ಲಿ ರೌಡಿಶೀಟರ್‌ಗಳ ಮೇಲೆ ಸಿಸಿಬಿ ಪೊಲೀಸರು (CCB) ವಿಶೇಷ ಕಾರ್ಯಾಚರಣೆ ನಡೆಸಿದ್ದು, ಹಲವು ಕಡೆಗಳಲ್ಲಿ ಪರಿಶೀಲನೆ ಕೈಗೊಳ್ಳಲಾಗಿದೆ.
ಈ ಕಾರ್ಯಾಚರಣೆಯ ವೇಳೆ ಇಂದಿರಾನಗರದ ರೌಡಿಶೀಟರ್ ಪ್ರಭಾಕರ್ ಎಂಬಾತನ ಮನೆಯ ಮೇಲೆ ದಾಳಿ ನಡೆಸಿ ಶೋಧ ನಡೆಸಲಾಗಿದೆ.
ಆ ಮನೆಯಲ್ಲಿ ಮಾರಕಾಸ್ತ್ರಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಸಿಸಿಬಿ ಡಿಸಿಪಿ ಶ್ರೀಹರಿಬಾಬು ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಇತರ ಅನುಮಾನಿತ ವ್ಯಕ್ತಿಗಳು ಮತ್ತು ಅವರ ವಾಹನಗಳನ್ನೂ ತಪಾಸಣೆ ಮಾಡಲಾಗಿದೆ.
ಒಟ್ಟಾರೆ ಮೂವತ್ತಕ್ಕೂ ಹೆಚ್ಚು ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ಕ್ರಮಗಳಿಗಾಗಿ ತನಿಖೆ ಮುಂದುವರಿದಿದೆ.

