Dailyhunt Logo
  • Light mode
    Follow system
    Dark mode
    • Play Story
    • App Story
ಭಾರಿ ಮಳೆಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಅವಾಂತರ; ವಾರ್ಡ್‌ಗೆ ನುಗ್ಗಿದ ನೀರು!

ಭಾರಿ ಮಳೆಗೆ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಅವಾಂತರ; ವಾರ್ಡ್‌ಗೆ ನುಗ್ಗಿದ ನೀರು!

AIN Kannada 6 hrs ago

ಕೋಲಾರ: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಕೋಲಾರ ಜಿಲ್ಲಾ ಆಸ್ಪತ್ರೆಯಲ್ಲಿ ಅವಾಂತರ ಸೃಷ್ಟಿಯಾಗಿದೆ. ಮಳೆಯ ನೀರು ಜನರಲ್ ವಾರ್ಡ್‌ಗೆ ನುಗ್ಗಿದ ಪರಿಣಾಮ ರೋಗಿಗಳು ಪರದಾಡುವಂತಾಗಿದೆ.

ವಾರ್ಡ್‌ನೊಳಗೆ ನೀರು ನುಗ್ಗಿದ್ದರಿಂದ ಹಲವು ಹಾಸಿಗೆಗಳು ಸಂಪೂರ್ಣವಾಗಿ ನೆನೆದಿವೆ.

ಇದರಿಂದ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳಿಗೆ ತೊಂದರೆಯಾಗಿದ್ದು, ಆಸ್ಪತ್ರೆಯ ಸಿಬ್ಬಂದಿ ಹಾಗೂ ರೋಗಿಗಳ ಕುಟುಂಬಸ್ಥರು ನೀರು ತೆರವುಗೊಳಿಸಲು ಹರಸಾಹಸಪಟ್ಟಿದ್ದಾರೆ.

ಜಿಲ್ಲಾಸ್ಪತ್ರೆಯ ಕಟ್ಟಡ ಹಳೆಯದಾಗಿದ್ದು, ಮಳೆ ಬಂದಾಗಲೆಲ್ಲಾ ಮೇಲ್ಛಾವಣಿ ಸೋರಿಕೆಯಾಗುತ್ತದೆ ಎನ್ನಲಾಗಿದೆ. ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳ ಕೊರತೆ ಹಾಗೂ ಅವ್ಯವಸ್ಥೆ ಮುಂದುವರಿದಿರುವುದರಿಂದ ರೋಗಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಲಾಗಿದೆ.

ಮಳೆ ಬಂದಾಗಲೆಲ್ಲಾ ಇದೇ ಸಮಸ್ಯೆ ಎದುರಾಗುತ್ತಿದ್ದರೂ ಶಾಶ್ವತ ಪರಿಹಾರ ಕಲ್ಪಿಸಿಲ್ಲ ಎಂದು ರೋಗಿಗಳು ಹಾಗೂ ಅವರ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News