Thursday, 23 Sep, 5.20 pm AIN Live News

ಬೆಂಗಳೂರು ನಗರ
ಬೊಮ್ಮಾಯಿ ನೇತೃತ್ವದಲ್ಲಿಯೇ 2023ರ ಚುನಾವಣೆ: ಬಿಜೆಪಿ 130-140 ಸ್ಥಾನಗಳನ್ನು ಗೆಲ್ಲಲಿದೆ: ಸಚಿವ ಆರ್.ಅಶೋಕ್ ವಿಶ್ವಾಸ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿಯೇ 2023ರ ಚುನಾವಣೆಯನ್ನು ಎದುರಿಸಲಾಗುವುದು. ಈ ಬಗ್ಗೆ ಈಗಾಗಲೇ ವರಿಷ್ಠರು ಕೂಡ ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಆರ್.ಅಶೋಕ್, ಸಿಎಂ ಬೊಮ್ಮಾಯಿ ಓರ್ವ ಸರಳ ವ್ಯಕ್ತಿ. ಆರಂಭದಿಂದಲು ಎಲ್ಲರಿಗೂ ಗೊತ್ತಿರುವ ವಿಚಾರ. ಬೊಮ್ಮಾಯಿ ನಡೆ ಬಗ್ಗೆ ಶಾಸಕರಿಗೂ ತುಂಬಾ ಅಭಿಮಾನವಿದೆ.

ಅಧಿವೇಶನದಲ್ಲಿ ವಿಪಕ್ಷಗಳನ್ನು ಕೂಡ ಸಮರ್ಥವಾಗಿ ಎದುರಿಸಿದ್ದಾರೆ. ಎಲ್ಲಾ ಶಾಸಕರ ಬೆಂಬಲ ಬೊಮ್ಮಾಯಿ ಅವರಿಗಿದೆ ಎಂದು ಹೇಳಿದರು. 2023ರ ಚುನಾವಣೆಯನ್ನು ಬೊಮ್ಮಾಯಿ ನೇತೃತ್ವದಲ್ಲೇ ಎದುರಿಸುತ್ತೇವೆ. ಚುನಾವಣೆಯಲ್ಲಿ ಬಿಜೆಪಿ 130-140 ಸ್ಥಾನಗಳನ್ನು ಗೆಲ್ಲಲಿದೆ. ಮುಂದಿನ ಸಿಎಂ ಯಾರು ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.

Share

Continue Reading

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: AIN Live News
Top