Dailyhunt Logo
  • Light mode
    Follow system
    Dark mode
    • Play Story
    • App Story
Breaking News : ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Breaking News : ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

AIN Kannada 3 weeks ago

ಚಾಮರಾಜನಗರ: ವಾಹನ ಖರೀದಿಗೆ ಸಹಾಯಧನ ಮಂಜೂರು ಮಾಡುವ ಹೆಸರಿನಲ್ಲಿ ಫಲಾನುಭವಿಯಿಂದ ಲಂಚ ಸ್ವೀಕರಿಸುತ್ತಿದ್ದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಹಾಗೂ ಕೇಸ್ ವರ್ಕರ್ ಅವರನ್ನು ಲೋಕಾಯುಕ್ತ ಪೊಲೀಸರು ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ಬಂಧಿತರನ್ನು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಚಾಮರಾಜನಗರ ಜಿಲ್ಲಾ ವ್ಯವಸ್ಥಾಪಕ ಬಿ.ಎನ್. ನಾಗೇಂದ್ರ ಹಾಗೂ ಕೇಸ್ ವರ್ಕರ್ ಸರ್ವಮಂಗಳ ಎಂದು ಗುರುತಿಸಲಾಗಿದೆ.

ಮಹಮ್ಮದ್ ಜುಬೇರ್ ಎಂಬ ಫಲಾನುಭವಿಗೆ ವಾಹನ ಖರೀದಿಗೆ ಸಹಾಯಧನ ಮಂಜೂರು ಮಾಡಲು ₹15 ಸಾವಿರ ಲಂಚ ನೀಡುವಂತೆ ಆರೋಪಿಗಳು ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಇದರಿಂದ ಬೇಸತ್ತ ಜುಬೇರ್, ಚಾಮರಾಜನಗರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ದೂರಿನ ಆಧಾರದ ಮೇಲೆ ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ನೇತೃತ್ವದಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಆರೋಪಿಗಳು ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿ ಇಬ್ಬರನ್ನೂ ರೆಡ್‌ಹ್ಯಾಂಡ್ ಆಗಿ ಬಂಧಿಸಿದರು.

ಬಂಧನದ ಬಳಿಕ ಲೋಕಾಯುಕ್ತ ಅಧಿಕಾರಿಗಳು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿ, ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿದಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News