Dailyhunt Logo
  • Light mode
    Follow system
    Dark mode
    • Play Story
    • App Story
ದಾವಣಗೆರೆ ಜಿಲ್ಲಾಸ್ಪತ್ರೆ ಅಗ್ನಿ ಅವಘಡಕ್ಕೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ

ದಾವಣಗೆರೆ ಜಿಲ್ಲಾಸ್ಪತ್ರೆ ಅಗ್ನಿ ಅವಘಡಕ್ಕೆ ಬಿಗ್ ಟ್ವಿಸ್ಟ್: ತನಿಖೆಯಲ್ಲಿ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ

AIN Kannada 1 week ago

ದಾವಣಗೆರೆ, ಜುಲೈ 02: ದಾವಣಗೆರೆ ಜಿಲ್ಲಾ ಆಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಜೂನ್ 30ರಂದು ಸಂಭವಿಸಿದ್ದ ಅಗ್ನಿ ಅವಘಡಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಅಂಶಗಳು ಬೆಳಕಿಗೆ ಬಂದಿವೆ. ಸುಸ್ಥಿತಿಯಲ್ಲಿ ಇಲ್ಲದ ಹಾಗೂ ಬಳಸಲು ಯೋಗ್ಯವಲ್ಲದ ವೈದ್ಯಕೀಯ ಯಂತ್ರೋಪಕರಣಗಳನ್ನು ಬಳಸಿದ್ದೇ ಈ ಅವಘಡಕ್ಕೆ ಪ್ರಮುಖ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.

ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅವರ ಆದೇಶದ ಮೇರೆಗೆ ಉಪ ವಿಭಾಗಾಧಿಕಾರಿ (ಎಸಿ) ಸಂತೋಷ್ ಕುಮಾರ್ ನೇತೃತ್ವದ ತನಿಖಾ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಆಪರೇಷನ್ ಥಿಯೇಟರ್‌ನಲ್ಲಿದ್ದ ಅರಿವಳಿಕೆ ವರ್ಕ್ ಸ್ಟೇಷನ್ ಸೇರಿದಂತೆ ಹಲವು ಪ್ರಮುಖ ವೈದ್ಯಕೀಯ ಸಾಧನಗಳು ತಾಂತ್ರಿಕವಾಗಿ ದೋಷಪೂರಿತವಾಗಿದ್ದವು ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನೂ ಗಂಭೀರ ಸಂಗತಿಯೆಂದರೆ, ಈ ಯಂತ್ರಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಸಂಪೂರ್ಣ ಹಾಳಾಗಿದ್ದರೂ ಅವುಗಳನ್ನು ಬದಲಾಯಿಸಲಾಗಿರಲಿಲ್ಲ. ಯಂತ್ರಗಳ ನಿರ್ವಹಣೆ ಹೊತ್ತಿದ್ದ ಖಾಸಗಿ ಏಜೆನ್ಸಿ ಈಗಾಗಲೇ ಲಿಖಿತ ರೂಪದಲ್ಲಿ ಬ್ಯಾಟರಿಗಳನ್ನು ತಕ್ಷಣ ಬದಲಾಯಿಸುವಂತೆ ಆಸ್ಪತ್ರೆ ಆಡಳಿತಕ್ಕೆ ಎಚ್ಚರಿಕೆ ನೀಡಿತ್ತು. ಆದರೂ ಎಚ್ಚರಿಕೆಯನ್ನು ನಿರ್ಲಕ್ಷ್ಯ ಮಾಡಿ ಅದೇ ಯಂತ್ರಗಳನ್ನು ಬಳಕೆ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಜೂನ್ 30ರಂದು ನಡೆದ ಘಟನೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿತ್ತು.

ಈ ಎಲ್ಲಾ ಅಂಶಗಳನ್ನು ಒಳಗೊಂಡ ಪ್ರಾಥಮಿಕ ತನಿಖಾ ವರದಿಯನ್ನು ಎಸಿ ಸಂತೋಷ್ ಕುಮಾರ್ ಶೀಘ್ರದಲ್ಲೇ ಜಿಲ್ಲಾಧಿಕಾರಿಗೆ ಸಲ್ಲಿಸಲಿದ್ದಾರೆ.

ಇದನ್ನೇ ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಸಚಿವ ಯುಟಿ ಖಾದರ್, ಘಟನೆಯ ಸಂಪೂರ್ಣ ತನಿಖೆಗೆ ಆದೇಶಿಸಿದ್ದು, ಆರೋಗ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ತಂಡ ಆಸ್ಪತ್ರೆಯಲ್ಲಿ ಪರಿಶೀಲನೆ ನಡೆಸಿದೆ. ಮುಖ್ಯ ವೈದ್ಯರು, ನರ್ಸಿಂಗ್ ಸಿಬ್ಬಂದಿ ಹಾಗೂ ತಾಂತ್ರಿಕ ಸಿಬ್ಬಂದಿಯಿಂದ ವಿವರವಾದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ತನಿಖಾ ವರದಿ ಆಧರಿಸಿ ತಪ್ಪಿತಸ್ಥ ವೈದ್ಯರು ಹಾಗೂ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News