Dailyhunt
ಗಾಳಿ ಸುದ್ದಿಗೆ ಬ್ರೇಕ್: HSRP ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದ ಸಾರಿಗೆ ಇಲಾಖೆ

ಗಾಳಿ ಸುದ್ದಿಗೆ ಬ್ರೇಕ್: HSRP ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದ ಸಾರಿಗೆ ಇಲಾಖೆ

AIN Kannada 2 weeks ago

ಬೆಂಗಳೂರು,: 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (HSRP) ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯವಲ್ಲ ಎಂಬ ಸುಳ್ಳು ಸುದ್ದಿ ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ, ಇಲಾಖೆ ಮಾಧ್ಯಮ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದೆ.

ಸಾರಿಗೆ ಇಲಾಖೆಯ ಪ್ರಕಾರ, 2019ರ ಏಪ್ರಿಲ್ 1ಕ್ಕೂ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯವಾಗಿದ್ದು, ಇದರಿಂದ ಯಾವುದೇ ವಿನಾಯಿತಿ ಇಲ್ಲ. ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ತಕ್ಷಣವೇ HSRP ಅಳವಡಿಸಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಕೇಂದ್ರ ಸರ್ಕಾರವು 1989ರ ಕೇಂದ್ರ ಮೋಟಾರು ವಾಹನ ನಿಯಮಗಳ 50ನೇ ವಿಧಿಯ ಅನ್ವಯ ಈ ನಿಯಮವನ್ನು 2018ರಲ್ಲಿ ಜಾರಿಗೆ ತಂದಿದ್ದು, ರಾಜ್ಯದಲ್ಲಿಯೂ ಇದು ಅನ್ವಯವಾಗುತ್ತಿದೆ. ಜೊತೆಗೆ, ರಾಜ್ಯ ಸಾರಿಗೆ ಇಲಾಖೆ 2023ರಲ್ಲಿ ಹೊರಡಿಸಿದ ಅಧಿಸೂಚನೆಯಲ್ಲಿಯೂ ಇದೇ ನಿಯಮವನ್ನು ಪುನರುಚ್ಚರಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಲಯವು ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಅವಕಾಶ ನೀಡಿದ್ದು, HSRP ಅಳವಡಿಕೆಯಲ್ಲಿ ರಾಜ್ಯ ಸರ್ಕಾರದ ನಿರ್ದೇಶನಗಳನ್ನು ಅನುಸರಿಸುವಂತೆ ಸೂಚಿಸಿದೆ.

ಒಟ್ಟಿನಲ್ಲಿ, ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ. ವಾಹನ ಮಾಲೀಕರು ಗಾಳಿ ಸುದ್ದಿಗಳಿಗೆ ಬಲಿಯಾಗದೆ, ನಿಯಮವನ್ನು ಪಾಲಿಸುವಂತೆ ಸಾರಿಗೆ ಇಲಾಖೆ ಮನವಿ ಮಾಡಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News