Dailyhunt Logo
  • Light mode
    Follow system
    Dark mode
    • Play Story
    • App Story
ಕಾವೇರಿ ಕಿಚ್ಚು: ಕರ್ನಾಟಕ ಬಂದ್ʼಗೆ ಡೇಟ್ ಫಿಕ್ಸ್! ಆಗಸ್ಟ್ 13 ರಂದು ಸ್ತಬ್ಧವಾಗಲಿದೆ ಕರುನಾಡು

ಕಾವೇರಿ ಕಿಚ್ಚು: ಕರ್ನಾಟಕ ಬಂದ್ʼಗೆ ಡೇಟ್ ಫಿಕ್ಸ್! ಆಗಸ್ಟ್ 13 ರಂದು ಸ್ತಬ್ಧವಾಗಲಿದೆ ಕರುನಾಡು

AIN Kannada 2 weeks ago

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಕನ್ನಡಪರ ಸಂಘಟನೆಗಳು ಆಗಸ್ಟ್ 13ರಂದು ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಿವೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ಹಾಗೂ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಹೌದು ಕರ್ನಾಟಕ ಬರ ಪರಿಸ್ಥಿತಿ ಎದುರಿಸುತ್ತಿರುವ ಸಂದರ್ಭದಲ್ಲಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುಗಡೆ ಮಾಡುತ್ತಿರುವುದನ್ನು ಖಂಡಿಸಿರುವ ಕನ್ನಡಪರ ಸಂಘಟನೆಗಳು, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ಹಾಗೂ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರ ನೇತೃತ್ವದಲ್ಲಿ ವಿವಿಧ ಕನ್ನಡಪರ ಸಂಘಟನೆಗಳ ಸಭೆ ನಡೆಯಿತು. ಸಭೆಯಲ್ಲಿ ಕಾವೇರಿ ವಿವಾದ, ನೀರು ಹಂಚಿಕೆ ಹಾಗೂ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಚರ್ಚೆ ನಡೆಸಲಾಯಿತು.

ಸಭೆಯ ಬಳಿಕ ಆಗಸ್ಟ್ 13ರಂದು ಕರ್ನಾಟಕ ಬಂದ್ ನಡೆಸಲು ಸಂಘಟನೆಗಳು ನಿರ್ಧರಿಸಿವೆ. ಕಾವೇರಿ ನೀರು ವಿಚಾರದಲ್ಲಿ ರಾಜ್ಯದ ಹಿತ ರಕ್ಷಿಸಲು ಸರ್ಕಾರಗಳ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಬಂದ್‌ಗೆ ಕರೆ ನೀಡಲಾಗಿದೆ ಎಂದು ಮುಖಂಡರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಬಂದ್ ಮೂಲಕ ಹೋರಾಟ ನಡೆಸಲು ಕನ್ನಡಪರ ಸಂಘಟನೆಗಳು ಮುಂದಾಗಿವೆ. ಕಾವೇರಿ ಜಲವಿವಾದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಸಂಘಟನೆಗಳು ಎಚ್ಚರಿಕೆ ನೀಡಿವೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News