Dailyhunt Logo
  • Light mode
    Follow system
    Dark mode
    • Play Story
    • App Story
ಕರ್ನಾಟಕ ಅರಣ್ಯ ಇಲಾಖೆಯಲ್ಲಿದೆ ಉದ್ಯೋಗಾವಕಾಶ; ಅರಣ್ಯ ವೀಕ್ಷಕರ ನೇಮಕಾತಿಗೆ ಸೆ. 7ರೊಳಗೆ ಅರ್ಜಿ ಸಲ್ಲಿಸಿ!

ಕರ್ನಾಟಕ ಅರಣ್ಯ ಇಲಾಖೆಯಲ್ಲಿದೆ ಉದ್ಯೋಗಾವಕಾಶ; ಅರಣ್ಯ ವೀಕ್ಷಕರ ನೇಮಕಾತಿಗೆ ಸೆ. 7ರೊಳಗೆ ಅರ್ಜಿ ಸಲ್ಲಿಸಿ!

AIN Kannada 1 week ago

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಗ್ರೂಪ್‌-ಡಿ (group D) ವೃಂದದ ಅರಣ್ಯ ವೀಕ್ಷಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಿಸಲಾಗಿದೆ. ಅಭ್ಯರ್ಥಿಗಳಿಗೆ ಸೆಪ್ಟೆಂಬರ್‌ 7ರವರೆಗೆ ಆನ್‌ʼಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಈ ಸಂಬಂಧ ಅರಣ್ಯ ಇಲಾಖೆ ಪರಿಷ್ಕೃತ ಅಧಿಸೂಚನೆ ಪ್ರಕಟಿಸಿದೆ.

ಯಾವ ಹುದ್ದೆಗಳಿಗೆ ನೇಮಕಾತಿ?

ಅರಣ್ಯ ವೀಕ್ಷಕರ ಹುದ್ದೆಗಳ ನೇಮಕಾತಿಯನ್ನು ರಾಜ್ಯದ ವಿವಿಧ ಅರಣ್ಯ ವಲಯಗಳಲ್ಲಿ ನಡೆಸಲಾಗುತ್ತದೆ. ವಲಯವಾರು ಹುದ್ದೆಗಳ ಹಂಚಿಕೆ ಈ ಕೆಳಗಿನಂತಿದೆ. ವಿಭಾಗವಾರು ಹಾಗೂ ವರ್ಗವಾರು ಹುದ್ದೆಗಳ ನಿಖರ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬೇಕು.

  • ಬೆಂಗಳೂರು - 70
  • ಬೆಳಗಾವಿ - 42
  • ಬಳ್ಳಾರಿ - 62
  • ಚಾಮರಾಜನಗರ - 169
  • ಚಿಕ್ಕಬಳ್ಳಾಪುರ - 56
  • ಧಾರವಾಡ - 12
  • ಹಾಸನ - 30
  • ಕೆನರಾ - 60
  • ಕೊಡಗು - 32
  • ಕಲಬುರಗಿ - 4
  • ಮಂಗಳೂರು - 54
  • ಮೈಸೂರು - 120
  • ಶಿವಮೊಗ್ಗ - 38

ಈ ನೇಮಕಾತಿಗೆ ಲಿಖಿತ ಪರೀಕ್ಷೆ ಇರುವುದಿಲ್ಲ.

ಶೈಕ್ಷಣಿಕ ಅರ್ಹತೆ ಏನು?

ಅರಣ್ಯ ವೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ʼಸಿ (10ನೇ ತರಗತಿ) ಉತ್ತೀರ್ಣರಾಗಿರಬೇಕು.

ವೇತನ ಎಷ್ಟು?

ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ ₹29,600ರಿಂದ ₹52,800ರವರೆಗೆ ವೇತನ ದೊರೆಯಲಿದೆ.

ವಯೋಮಿತಿ

ಅಭ್ಯರ್ಥಿಯ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 30 ವರ್ಷ ನಿಗದಿಪಡಿಸಲಾಗಿದೆ.

ನಿಯಮಾನುಸಾರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಪ.ಜಾ., ಪ.ಪಂ. ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 3 ವರ್ಷ, ಇತರ ಅರ್ಹ ಹಿಂದುಳಿದ ವರ್ಗಗಳಿಗೆ 2 ವರ್ಷ ವಯೋಮಿತಿ ಸಡಿಲಿಕೆ ಅನ್ವಯಿಸುತ್ತದೆ. ನಿಖರ ವರ್ಗವಾರು ವಯೋಮಿತಿ ಹಾಗೂ ಮೀಸಲಾತಿ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬೇಕು.

ಅರ್ಜಿ ಶುಲ್ಕ ಎಷ್ಟು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ನಿಗದಿತ ಶುಲ್ಕ ಪಾವತಿಸಬೇಕು. ಸಾಮಾನ್ಯ ವರ್ಗ ಹಾಗೂ ಸಂಬಂಧಿತ ಹಿಂದುಳಿದ ವರ್ಗಗಳ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಪ.ಜಾ., ಪ.ಪಂ. ಹಾಗೂ ಪ್ರವರ್ಗ-1ರ ಮಹಿಳಾ ಅಭ್ಯರ್ಥಿಗಳಿಗೆ ₹50, ಪುರುಷ ಅಭ್ಯರ್ಥಿಗಳಿಗೆ ₹100 ಅರ್ಜಿ ಶುಲ್ಕ ವಿಧಿಸಲಾಗಿದೆ.

ಆಯ್ಕೆ ಹೇಗೆ ನಡೆಯಲಿದೆ?

ಈ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳ ಎಸ್‌ಎಸ್‌ಎಲ್‌ಸಿ ಅಂಕಗಳು, ನಿಗದಿತ ಶಾರೀರಿಕ ಮಾನದಂಡಗಳ ಪರೀಕ್ಷೆ, ದೈಹಿಕ ತಾಳ್ವಿಕೆ ಪರೀಕ್ಷೆ ಹಾಗೂ ದೈಹಿಕ ಕಾರ್ಯಸಮರ್ಥನೆ ಪರೀಕ್ಷೆ ಸೇರಿದಂತೆ ಅಧಿಸೂಚನೆಯಲ್ಲಿ ನಿಗದಿಪಡಿಸಿರುವ ಮಾನದಂಡಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅಭ್ಯರ್ಥಿಗಳು ಶಾರೀರಿಕ ಮಾನದಂಡ, ದೈಹಿಕ ಪರೀಕ್ಷೆಗಳ ಅರ್ಹತಾ ಮಾನದಂಡ ಹಾಗೂ ಇತರ ನಿಯಮಗಳ ಸಂಪೂರ್ಣ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಕಡ್ಡಾಯವಾಗಿ ಓದಬೇಕು.

ಅರ್ಜಿ ಸಲ್ಲಿಸಲು ಸೆ. 7 ಕೊನೆಯ ದಿನ

ಅರಣ್ಯ ವೀಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಹೊಂದಿರುವ ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್‌ 7ರೊಳಗೆ ಆನ್‌ʼಲೈನ್‌ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಅರ್ಜಿ ಸಲ್ಲಿಸುವ ಮೊದಲು ವಿದ್ಯಾರ್ಹತೆ, ವಯೋಮಿತಿ, ಶುಲ್ಕ, ಮೀಸಲಾತಿ ಹಾಗೂ ದೈಹಿಕ ಅರ್ಹತೆಗಳಿಗೆ ಸಂಬಂಧಿಸಿದ ನಿಯಮಗಳನ್ನು ಪರಿಶೀಲಿಸುವುದು ಸೂಕ್ತ.

ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಹಾಗೂ ಅಧಿಕೃತ ಅಧಿಸೂಚನೆಯನ್ನು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ಜಾಲತಾಣ aranya.gov.inನಲ್ಲಿ ಪರಿಶೀಲಿಸಬಹುದು.

Dailyhunt
Disclaimer: This content has not been generated, created or edited by Dailyhunt. Publisher: AIN Live News