Dailyhunt Logo
  • Light mode
    Follow system
    Dark mode
    • Play Story
    • App Story
ಕರ್ನಾಟಕದಲ್ಲಿ ಮುಂದಿನ 5 ದಿನ ಭಾರಿ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್, ರೆಡ್ ಅಲರ್ಟ್!

ಕರ್ನಾಟಕದಲ್ಲಿ ಮುಂದಿನ 5 ದಿನ ಭಾರಿ ಮಳೆ; ಹಲವು ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್, ರೆಡ್ ಅಲರ್ಟ್!

AIN Kannada 1 week ago

ಬೆಂಗಳೂರು: ಜೂನ್ ತಿಂಗಳಲ್ಲಿ ಕೈಕೊಟ್ಟಿದ್ದ ಮುಂಗಾರು ಮಳೆ ಜುಲೈ ಆರಂಭದಿಂದಲೇ ರಾಜ್ಯದಲ್ಲಿ ಮತ್ತೆ ಚುರುಕುಗೊಂಡಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಯೆಲ್ಲೋ, ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಮಾರುತಗಳು ಬಲಗೊಂಡಿರುವ ಹಿನ್ನೆಲೆ ಈ ಭಾಗದ ಜನರು ಎಚ್ಚರಿಕೆಯಿಂದ ಇರಲು ಹವಾಮಾನ ಇಲಾಖೆ ಸೂಚಿಸಿದೆ.

ಬೆಂಗಳೂರುದಲ್ಲಿ ಹೇಗಿರಲಿದೆ ಹವಾಮಾನ?

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 3-4 ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ನಗರದ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 27-29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಸ್ಥಿತಿ

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿತ್ರದುರ್ಗ, ಹಾಸನ ಹಾಗೂ ಮೈಸೂರು ಜಿಲ್ಲೆಗಳಲ್ಲೂ ಮುಂಗಾರು ಮಳೆ ಮುಂದುವರಿಯಲಿದೆ.

ಜೂನ್‌ನಲ್ಲಿ ನಿರಾಸೆ ಮೂಡಿಸಿದ್ದ ಮಳೆ ಇದೀಗ ಜುಲೈ ಮೊದಲ ವಾರದಲ್ಲೇ ಚುರುಕುಗೊಂಡಿರುವುದು ರೈತರಲ್ಲಿ ಹೊಸ ಆಶಾಭಾವನೆ ಮೂಡಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News