Dailyhunt Logo
  • Light mode
    Follow system
    Dark mode
    • Play Story
    • App Story
ಕ್ಯಾಪ್ಸಿಕಂ ತಿನ್ನುವುದರಿಂದ ಏನು ಲಾಭ? ಆರೋಗ್ಯಕ್ಕೆ ಇದೇಕೆ ಉತ್ತಮ?

ಕ್ಯಾಪ್ಸಿಕಂ ತಿನ್ನುವುದರಿಂದ ಏನು ಲಾಭ? ಆರೋಗ್ಯಕ್ಕೆ ಇದೇಕೆ ಉತ್ತಮ?

AIN Kannada 1 day ago

ಡುಗೆಯಲ್ಲಿ ಹೆಚ್ಚಾಗಿ ಬಳಸುವ ಕ್ಯಾಪ್ಸಿಕಂ ಕೇವಲ ರುಚಿ ಮತ್ತು ಪರಿಮಳ ಹೆಚ್ಚಿಸುವ ತರಕಾರಿ ಮಾತ್ರವಲ್ಲ, ಆರೋಗ್ಯಕ್ಕೆ ಅಗತ್ಯವಾದ ಹಲವು ಪೋಷಕಾಂಶಗಳ ಆಗರವಾಗಿದೆ.

ವಿಟಮಿನ್‌ಗಳು, ಖನಿಜಾಂಶಗಳು ಹಾಗೂ ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿರುವ ಕ್ಯಾಪ್ಸಿಕಂ ನಿಯಮಿತ ಸೇವನೆಯಿಂದ ದೇಹಕ್ಕೆ ಅನೇಕ ಆರೋಗ್ಯಕರ ಪ್ರಯೋಜನಗಳು ದೊರೆಯುತ್ತವೆ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಕಣ್ಣಿನ ಆರೋಗ್ಯಕ್ಕೆ ಸಹಕಾರಿ

ಕ್ಯಾಪ್ಸಿಕಂನಲ್ಲಿ ವಿಟಮಿನ್ ಎ ಹಾಗೂ ಲ್ಯೂಟಿನ್ ಅಂಶಗಳು ಸಮೃದ್ಧವಾಗಿವೆ. ವಿಶೇಷವಾಗಿ ಕೆಂಪು ಕ್ಯಾಪ್ಸಿಕಂ ಕಣ್ಣಿನ ದೃಷ್ಟಿ ಸುಧಾರಿಸಲು ನೆರವಾಗುವುದರ ಜೊತೆಗೆ ವಯೋಸಹಜ ಕಣ್ಣಿನ ಸಮಸ್ಯೆಗಳು ಮತ್ತು ಕ್ಯಾಟರಾಕ್ಟ್ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ತೂಕ ಇಳಿಕೆಗೆ ನೆರವು

ಕ್ಯಾಪ್ಸಿಕಂನಲ್ಲಿರುವ ಕ್ಯಾಪ್ಸೈಸಿನ್ ಅಂಶವು ದೇಹದ ಮೆಟಾಬಾಲಿಸಂ ಹೆಚ್ಚಿಸಲು ನೆರವಾಗುತ್ತದೆ. ಜೊತೆಗೆ ಫೈಬರ್ ಅಧಿಕವಾಗಿರುವುದರಿಂದ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದರಿಂದ ಅತಿಯಾಗಿ ಆಹಾರ ಸೇವಿಸುವ ಅಭ್ಯಾಸ ಕಡಿಮೆಯಾಗಿ ತೂಕ ನಿಯಂತ್ರಣಕ್ಕೆ ಸಹಕಾರಿಯಾಗುತ್ತದೆ.

ಹೃದಯದ ಆರೋಗ್ಯ ಕಾಪಾಡುತ್ತದೆ

ಕೆಂಪು ಕ್ಯಾಪ್ಸಿಕಂನಲ್ಲಿರುವ ಲೈಕೋಪಿನ್ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ತಗ್ಗಿಸಲು ನೆರವಾಗುತ್ತದೆ. ಹಸಿರು ಕ್ಯಾಪ್ಸಿಕಂನಲ್ಲಿರುವ ಫೈಬರ್, ಫೋಲೇಟ್ ಮತ್ತು ವಿಟಮಿನ್ ಬಿ6 ರಕ್ತನಾಳಗಳ ಆರೋಗ್ಯವನ್ನು ಕಾಪಾಡಿ ಹೃದಯ ಸಂಬಂಧಿ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡಬಹುದು.

ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ

ಕ್ಯಾಪ್ಸಿಕಂನಲ್ಲಿ ವಿಟಮಿನ್ ಸಿ ಹೇರಳವಾಗಿದ್ದು, ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಜೊತೆಗೆ ಕೊಲಾಜನ್ ಉತ್ಪಾದನೆಯನ್ನು ಉತ್ತೇಜಿಸಿ ಚರ್ಮದ ಕಾಂತಿ ಮತ್ತು ಆರೋಗ್ಯವನ್ನು ಕಾಪಾಡಲು ನೆರವಾಗುತ್ತದೆ.

ಕ್ಯಾನ್ಸರ್ ಅಪಾಯ ತಗ್ಗಿಸಲು ಸಹಕಾರಿ

ಕ್ಯಾಪ್ಸಿಕಂನಲ್ಲಿರುವ ಶಕ್ತಿಶಾಲಿ ಆಂಟಿಆಕ್ಸಿಡೆಂಟ್‌ಗಳು ದೇಹದಲ್ಲಿನ ಫ್ರೀ ರ್ಯಾಡಿಕಲ್‌ಗಳ ವಿರುದ್ಧ ಹೋರಾಡಿ ಜೀವಕೋಶಗಳನ್ನು ರಕ್ಷಿಸುತ್ತವೆ. ಇದರಿಂದ ಕೆಲವು ವಿಧದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಲು ಸಹಕಾರಿಯಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News