Dailyhunt
ಮದುವೆಗೆ ಅವಕಾಶ: ಆರೋಪಿಗೆ 22 ದಿನ ಷರತ್ತುಬದ್ಧ ಜಾಮೀನು - ಹೈಕೋರ್ಟ್

ಮದುವೆಗೆ ಅವಕಾಶ: ಆರೋಪಿಗೆ 22 ದಿನ ಷರತ್ತುಬದ್ಧ ಜಾಮೀನು - ಹೈಕೋರ್ಟ್

AIN Kannada 1 week ago

ಬೆಂಗಳೂರು: ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕ ಸಂಬಂಧ ಹೊಂದಿದ ಆರೋಪ ಸಂಬಂಧ, ಆರೋಪಿಗೆ ಮದುವೆಯಾಗಬೇಕು ಎಂಬ ಷರತ್ತಿನಡಿ 20 ದಿನಗಳ ಮಧ್ಯಂತರ ಜಾಮೀನು ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ಪ್ರಕರಣದ ವಿಶಿಷ್ಟ ಪರಿಸ್ಥಿತಿಗಳನ್ನು ಪರಿಗಣಿಸಿ ಈ ತೀರ್ಪು ನೀಡಿದೆ.

ಆರೋಪಿಯು ಸಂತ್ರಸ್ತೆಯನ್ನು ಮದುವೆಯಾಗಬೇಕಿರುವ ಹಿನ್ನೆಲೆ ಮಧ್ಯಂತರ ಜಾಮೀನು ನೀಡುವುದು ಸೂಕ್ತ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಮಂಡ್ಯ ಜಿಲ್ಲೆಯ ಹುಲ್ಲಗಾಲದ ಮಹದೇವ್ ಅಲಿಯಾಸ್ ಮಾದೇವ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪರಿಗಣಿಸಿ, ನ್ಯಾಯಾಲಯವು ಏಪ್ರಿಲ್ 2ರಿಂದ ಏಪ್ರಿಲ್ 24ರವರೆಗೆ ಜಾಮೀನು ಮಂಜೂರು ಮಾಡಿದೆ.

ಜಾಮೀನಿನ ಅವಧಿಯಲ್ಲಿ ಆರೋಪಿ ಸಂತ್ರಸ್ತೆಯನ್ನು ಮದುವೆಯಾಗಬೇಕು ಮತ್ತು ಮದುವೆಯಾದ ನಂತರ ನೋಂದಾಯಿತ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ.

ಆರೋಪಿಯನ್ನು ಬಿಡುಗಡೆ ಮಾಡಲು ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 24ಕ್ಕೆ ಮುಂದೂಡಲಾಗಿದೆ. ಈ ತೀರ್ಪು ತನ್ನ ಷರತ್ತುಗಳ ಕಾರಣದಿಂದ ಗಮನ ಸೆಳೆಯುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News