ಮಂಡ್ಯ: ಜಿಲ್ಲೆಯಲ್ಲಿ ಬಾಲಗರ್ಭಿಣಿಯರ ಸಂಖ್ಯೆ ಆತಂಕಕಾರಿ ರೀತಿಯಲ್ಲಿ ಏರಿಕೆಯಾಗುತ್ತಿರುವುದು ಬೆಳಕಿಗೆ ಬಂದಿದೆ. ಆರೋಗ್ಯ ಇಲಾಖೆಯ RCH ಪೋರ್ಟಲ್ ಮಾಹಿತಿ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಜಿಲ್ಲೆಯಲ್ಲಿ 1,354 ಬಾಲಗರ್ಭಿಣಿ ಪ್ರಕರಣಗಳು ದಾಖಲಾಗಿವೆ.
ಈ ಅಂಕಿಅಂಶಗಳು ಜಿಲ್ಲೆಯ ಸಾಮಾಜಿಕ ಮತ್ತು ಆರೋಗ್ಯ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆಗಳನ್ನು ಎತ್ತುತ್ತಿವೆ.
ಅಪ್ರಾಪ್ತ ವಯಸ್ಸಿನ ಗರ್ಭಧಾರಣೆ ಪ್ರಕರಣಗಳು ಹೆಚ್ಚುತ್ತಿರುವುದು ಮಕ್ಕಳ ಸುರಕ್ಷತೆ, ಶಿಕ್ಷಣ ಮತ್ತು ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಸರ್ಕಾರ ಮತ್ತು ಸಂಬಂಧಿತ ಇಲಾಖೆ ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.

