Dailyhunt Logo
  • Light mode
    Follow system
    Dark mode
    • Play Story
    • App Story
Monsoon Alert: ಕರ್ನಾಟಕದಲ್ಲಿ ಮಳೆ ಅಬ್ಬರ: 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

Monsoon Alert: ಕರ್ನಾಟಕದಲ್ಲಿ ಮಳೆ ಅಬ್ಬರ: 8 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ!

AIN Kannada 3 months ago

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ 8 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಆರೆಂಜ್ ಅಲರ್ಟ್ ಘೋಷಿಸಿದೆ.

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ.

ವೇಗದಲ್ಲಿ ಬಲವಾದ ಗಾಳಿ ಬೀಸುವ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಆರೆಂಜ್ ಅಲರ್ಟ್ ಜಾರಿಯಲ್ಲಿದೆ.

ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಬಲವಾದ ಗಾಳಿಯೊಂದಿಗೆ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಇದೇ ವೇಳೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲೂ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾರ್ವಜನಿಕರು ಭಾರೀ ಮಳೆ, ಬಿರುಗಾಳಿ ಹಾಗೂ ಜೋರಾದ ಗಾಳಿಯ ಸಂದರ್ಭಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News