ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಪರಿಷತ್ ಶಾಸಕ ಟಿ.ಎ. ಶರವಣ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, "ತಮಗೆ ದೊರೆತಿರುವ ಈ ಮಹತ್ವದ ಅವಕಾಶವನ್ನು ಜನಪರ ಕೆಲಸಗಳಿಗೆ ಹಾಗೂ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಸಂಪೂರ್ಣವಾಗಿ ಬಳಸಿಕೊಳ್ಳಲಿ" ಎಂದು ಆಶಯ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ರಾಜ್ಯದ ಜನರ ನಿರೀಕ್ಷೆಗಳನ್ನು ಈಡೇರಿಸುವ ದಿಕ್ಕಿನಲ್ಲಿ ಹೊಸ ಸರ್ಕಾರ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ.
ಹೊಸ ನಾಯಕತ್ವದಡಿ ರಾಜ್ಯವು ಅಭಿವೃದ್ಧಿಯ ಹೊಸ ಹಾದಿಯಲ್ಲಿ ಮುನ್ನಡೆಯಲಿ ಎಂಬುದು ಸಾರ್ವಜನಿಕರ ನಿರೀಕ್ಷೆಯಾಗಿದೆ.
ಇಂದು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ್ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು.

