Dailyhunt Logo
  • Light mode
    Follow system
    Dark mode
    • Play Story
    • App Story

ಪಾಕ್ ಉಗ್ರರ ಜೊತೆ ನಂಟು ಆರೋಪ": ಇಬ್ಬರು ಯುವಕರು ಅರೆಸ್ಟ್

AIN Kannada 2 hrs ago

ದಾವಣಗೆರೆ: ಪಾಕಿಸ್ತಾನ ಮೂಲದ ಶಂಕಿತ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ದಾವಣಗೆರೆ ಮತ್ತು ತುಮಕೂರಿನ ಇಬ್ಬರು ಯುವಕರನ್ನು ತುಮಕೂರು ಪೊಲೀಸರು ಬಂಧಿಸಿದ್ದಾರೆ. ಭಾರತದಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಸಂಚು ರೂಪಿಸಲಾಗಿತ್ತು ಎಂಬ ಶಂಕೆಯ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ.

ದಾವಣಗೆರೆಯ ಬಿಡಿ ಲೇಔಟ್ ನಿವಾಸಿ ಜಮೀರ್ ಖಾನ್ (22) ಹಾಗೂ ತುಮಕೂರಿನ ಅಲ್ಲಾಭಕ್ಷಿ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಪಾಕಿಸ್ತಾನ ಮೂಲದ ಶಂಕಿತ ಉಗ್ರರಾದ ಶಾಬಾಸ್ ಭುಟ್ಟಿ ಮತ್ತು ರಾಣಾ ಉನೇನ್ ಜೊತೆ ನಿರಂತರ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಗುಪ್ತಚರ ಇಲಾಖೆಗೆ ಲಭ್ಯವಾಗಿತ್ತು.

ಈ ಮಾಹಿತಿಯ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ವಾಟ್ಸಾಪ್, ಇನ್‌ಸ್ಟಾಗ್ರಾಂ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಆರೋಪಿಗಳು ವಿದೇಶದಲ್ಲಿರುವ ಶಂಕಿತ ಉಗ್ರರೊಂದಿಗೆ ಸಂಪರ್ಕದಲ್ಲಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ದೇಶದಲ್ಲಿ ಅಶಾಂತಿ ಹಾಗೂ ವಿಧ್ವಂಸಕ ಚಟುವಟಿಕೆಗಳಿಗೆ ನೆರವಾಗುವ ಉದ್ದೇಶದಿಂದ ಸ್ಥಳೀಯ ಯುವಕರನ್ನು ಸಂಪರ್ಕಿಸುವ ಪ್ರಯತ್ನ ನಡೆದಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿಗಳ ಡಿಜಿಟಲ್ ಸಂಪರ್ಕ, ಹಣಕಾಸು ವ್ಯವಹಾರ ಹಾಗೂ ವಿದೇಶಿ ನಂಟುಗಳ ಕುರಿತು ತನಿಖೆ ಮುಂದುವರಿದಿದೆ.

ಇದಲ್ಲದೆ, ಮುಂಬೈ ಮೂಲದ ಉದ್ಯಮಿಯೊಬ್ಬರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಕುರಿತು ಆರೋಪಿಗಳಿಗೆ ಸೂಚನೆ ನೀಡಲಾಗಿತ್ತು ಎಂಬ ಮಾಹಿತಿಯನ್ನೂ ತನಿಖಾ ಸಂಸ್ಥೆಗಳು ಪರಿಶೀಲಿಸುತ್ತಿವೆ. ಯಾವುದೇ ಕೃತ್ಯ ನಡೆಯುವ ಮುನ್ನವೇ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆ ಮುಂದುವರಿದಿದ್ದು, ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News