Dailyhunt Logo
  • Light mode
    Follow system
    Dark mode
    • Play Story
    • App Story
ಪಿಯುಸಿ ವಿದ್ಯಾರ್ಥಿನಿಗೆ  ನಂಬಿಸಿ ಲೈಂಗಿಕ ದೌರ್ಜನ್ಯ: ಇಬ್ಬರು ಮಕ್ಕಳ ತಂದೆ, ಕಾಮುಕ ಉಪನ್ಯಾಸಕ ಜೈಲುಪಾಲು

ಪಿಯುಸಿ ವಿದ್ಯಾರ್ಥಿನಿಗೆ ನಂಬಿಸಿ ಲೈಂಗಿಕ ದೌರ್ಜನ್ಯ: ಇಬ್ಬರು ಮಕ್ಕಳ ತಂದೆ, ಕಾಮುಕ ಉಪನ್ಯಾಸಕ ಜೈಲುಪಾಲು

AIN Kannada 1 week ago

ಳ್ಳಾರಿ: ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರ ಬೋಧಿಸಬೇಕಿದ್ದ ಖಾಸಗಿ ಕಾಲೇಜಿನ ಉಪನ್ಯಾಸಕನೇ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಪ್ರೀತಿಯ ಬಲೆಗೆ ಬೀಳಿಸಿ ಲೈಂಗಿಕವಾಗಿ ಬಳಸಿಕೊಂಡಿರುವ ಆಘಾತಕಾರಿ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ ಇಬ್ಬರು ಮಕ್ಕಳ ತಂದೆಯಾಗಿದ್ದರೂ, ವಿದ್ಯಾರ್ಥಿನಿಗೆ ಮದುವೆಯಾಗುವುದಾಗಿ ನಂಬಿಸಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಉಪನ್ಯಾಸಕನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಳ್ಳಾರಿ ನಗರದ ಖಾಸಗಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಎಂದು ಗುರುತಿಸಲಾಗಿದೆ. ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ 2025ರಲ್ಲಿ ಕಾಲೇಜಿನಲ್ಲೇ ಪರಿಚಯ ಬೆಳೆಸಿಕೊಂಡಿದ್ದ ಆತ, ಬಳಿಕ ಸ್ನೇಹವನ್ನು ಪ್ರೀತಿಯ ಹೆಸರಿನಲ್ಲಿ ದುರುಪಯೋಗಪಡಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ವಿದ್ಯಾರ್ಥಿನಿಗೆ "ನಿನ್ನನ್ನು ಮದುವೆಯಾಗುತ್ತೇನೆ, ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುತ್ತೇನೆ" ಎಂದು ನಂಬಿಕೆ ಮೂಡಿಸಿದ ಆರೋಪಿ, ಪೋಷಕರು ಹಾಗೂ ಸಮಾಜದ ವಿರೋಧವಿದ್ದರೂ ಆಕೆಯನ್ನು ಪದೇಪದೆ ನಿರ್ಜನ ಪ್ರದೇಶಗಳಿಗೆ ಕರೆದೊಯ್ದು ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕೆಲ ದಿನಗಳ ಬಳಿಕ ಆರೋಪಿಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿರುವ ಸತ್ಯ ಬಹಿರಂಗವಾಗುತ್ತಿದ್ದಂತೆ ವಿದ್ಯಾರ್ಥಿನಿ ಹಾಗೂ ಆಕೆಯ ಕುಟುಂಬ ಬೆಚ್ಚಿಬಿದ್ದಿದೆ. ಬಳಿಕ ವಿದ್ಯಾರ್ಥಿನಿಯ ಪೋಷಕರು ಬಳ್ಳಾರಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಪೊಲೀಸರು ಪೋಕ್ಸೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ.

ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಳ್ಳಲು ಯತ್ನಿಸಿದ್ದ ಉಪನ್ಯಾಸಕ ರವಿಕಿರಣ್‌ನನ್ನು ಬಳ್ಳಾರಿ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News