Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯ ಸಾರಿಗೆ ನೌಕರರಿಗೆ ಬಂಪರ್ ಸಿಹಿಸುದ್ದಿ: ಶೇ.12.5 ವೇತನ ಹೆಚ್ಚಳ ಜಾರಿ!

ರಾಜ್ಯ ಸಾರಿಗೆ ನೌಕರರಿಗೆ ಬಂಪರ್ ಸಿಹಿಸುದ್ದಿ: ಶೇ.12.5 ವೇತನ ಹೆಚ್ಚಳ ಜಾರಿ!

AIN Kannada 4 months ago

ಬೆಂಗಳೂರು: ರಾಜ್ಯದ ಸಾರಿಗೆ ನೌಕರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ನಾಲ್ಕು ಸಾರಿಗೆ ನಿಗಮಗಳ ನೌಕರರ ಮೂಲ ವೇತನವನ್ನು ಶೇಕಡಾ 12.5ರಷ್ಟು ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಆದೇಶವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಅನ್ವಯವಾಗಲಿದೆ.

ಹೊಸ ವೇತನ ಪರಿಷ್ಕರಣೆ 2025ರ ಏಪ್ರಿಲ್ 1ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬಂದಿದ್ದು, ಜುಲೈ ತಿಂಗಳ ವೇತನದಲ್ಲೇ ಪರಿಷ್ಕೃತ ಸಂಬಳ ಜಮೆಯಾಗಲಿದೆ. ಜೊತೆಗೆ ಈಗಾಗಲೇ ಬಾಕಿ ಉಳಿದಿರುವ ವೇತನದ ಮೊದಲ ಕಂತಿನ ಹಣವನ್ನೂ ಸರ್ಕಾರ ಬಿಡುಗಡೆ ಮಾಡಿದೆ.

ಈ ವೇತನ ಹೆಚ್ಚಳದಿಂದ ರಾಜ್ಯದ ಸುಮಾರು 1.05 ಲಕ್ಷ ಸಾರಿಗೆ ನೌಕರರಿಗೆ ನೇರ ಲಾಭವಾಗಲಿದೆ. ಇದರಿಂದ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು 72.80 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗಲಿದೆ ಎಂದು ತಿಳಿದುಬಂದಿದೆ.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಅವಧಿಯಲ್ಲಿ ವೇತನ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದ್ದು, ಈ ತಿಂಗಳಿನಿಂದಲೇ ಪರಿಷ್ಕೃತ ವೇತನ ನೌಕರರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News