ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ವರದರಾಜ್ ಹೋಟೆಲ್ ಸಮೀಪ ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಕಾರವಾರದಿಂದ ಉಡುಪಿ ಕಡೆಗೆ ಸಚಿವರನ್ನು ಕರೆದೊಯ್ಯುತ್ತಿದ್ದ ಬೆಂಗಾವಲು ವಾಹನಗಳ ನಡುವೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ವೇಳೆ ಅಲಗೇರಿ ಮೂಲದ ಸಂದೀಪ್ ನಾಯಕ್ ಅವರು ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಡಿಕ್ಕಿ ಸಂಭವಿಸಿದೆ.
ಅಪಘಾತದ ತೀವ್ರತೆಯಿಂದ ಸಂದೀಪ್ ನಾಯಕ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಸಚಿವ ಯು.ಟಿ. ಖಾದರ್ ಅವರು ಸ್ವತಃ ಮಧ್ಯಪ್ರವೇಶಿಸಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲು ವ್ಯವಸ್ಥೆ ಮಾಡಿದ್ದಾರೆ.
ಗಾಯಾಳುವನ್ನು ಅಂಕೋಲಾ ಪಟ್ಟಣದ ಆರ್ಯ ಮೆಡಿಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

