Dailyhunt Logo
  • Light mode
    Follow system
    Dark mode
    • Play Story
    • App Story
ಸಿದ್ದರಾಮಯ್ಯ ರಾಜೀನಾಮೆಗೂ ಮುನ್ನ ಆಪ್ತ ಅಧಿಕಾರಿಗಳ ವರ್ಗಾವಣೆ; ಆಡಳಿತ ವಲಯದಲ್ಲಿ ಚರ್ಚೆ

ಸಿದ್ದರಾಮಯ್ಯ ರಾಜೀನಾಮೆಗೂ ಮುನ್ನ ಆಪ್ತ ಅಧಿಕಾರಿಗಳ ವರ್ಗಾವಣೆ; ಆಡಳಿತ ವಲಯದಲ್ಲಿ ಚರ್ಚೆ

AIN Kannada 4 months ago

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಆಡಳಿತ ವಲಯದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಸಿದ್ದರಾಮಯ್ಯ ಪದತ್ಯಾಗಕ್ಕೂ ಮುನ್ನವೇ ಅವರ ಆಪ್ತ ಅಧಿಕಾರಿಗಳನ್ನು ವಿವಿಧ ಇಲಾಖೆಗೆ ವರ್ಗಾವಣೆ ಮಾಡಿರುವುದು ರಾಜಕೀಯ ಹಾಗೂ ಆಡಳಿತ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ಕೃಷಿ ಮಾರಾಟ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಇದೇ ವೇಳೆ ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿಯಾಗಿದ್ದ ರಮೇಶ್ ಪಿ. ಕೋನರೆಡ್ಡಿ ಅವರನ್ನು ವಿದ್ಯುತ್ ಪ್ರಸರಣ ನಿಗಮದ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ.

ಇನ್ನೂ ಮುಖ್ಯಮಂತ್ರಿ ಜಂಟಿ ಕಾರ್ಯದರ್ಶಿಯಾಗಿದ್ದ ಟಿ.ಎನ್. ಕೃಷ್ಣಮೂರ್ತಿ ಅವರನ್ನು ನಗರಾಭಿವೃದ್ಧಿ ಇಲಾಖೆಯ ಜಂಟಿ ಕಾರ್ಯದರ್ಶಿ-2 ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಹಾಗೆಯೇ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬಿ. ಶಿವಸ್ವಾಮಿ ಅವರನ್ನು ಕ್ರೈಸ್ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕರಾಗಿ ನಿಯೋಜಿಸಲಾಗಿದೆ.

ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ ತಮ್ಮ ಆಡಳಿತ ಶೈಲಿಗೆ ಹೊಂದುವ ಅಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳುವುದು ಸಾಮಾನ್ಯ ಪ್ರಕ್ರಿಯೆಯಾಗಿರುತ್ತದೆ. ಇದೇ ಹಿನ್ನೆಲೆಯಲ್ಲಿ 2023ರಲ್ಲಿ ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ಗುತ್ತಿಗೆ ಆಧಾರದ ಮೇಲೆ ತಮ್ಮ ಆಪ್ತ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದರು.

ಜೊತೆಗೆ ಕೆಎಎಸ್ ಹಿರಿಯ ಶ್ರೇಣಿ ಅಧಿಕಾರಿ ರಮೇಶ್ ಪಿ. ಕೋನರೆಡ್ಡಿ ಅವರನ್ನು ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿಯಾಗಿ ನಿಯೋಜಿಸಲಾಗಿತ್ತು. ಇದೀಗ ಮುಖ್ಯಮಂತ್ರಿ ಸ್ಥಾನ ತೊರೆಯುವ ಮುನ್ನವೇ ತಮ್ಮ ಆಪ್ತ ಅಧಿಕಾರಿಗಳನ್ನು ವಿವಿಧ ಹುದ್ದೆಗಳಿಗೆ ವರ್ಗಾವಣೆ ಮಾಡಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಇದೇ ವೇಳೆ ಸಿದ್ದರಾಮಯ್ಯ ಅವರ ರಾಜೀನಾಮೆಯ ಬಳಿಕ ಮುಂದಿನ ಮುಖ್ಯಮಂತ್ರಿ ಆಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಲಿದ್ದಾರೆ ಎಂಬ ರಾಜಕೀಯ ಬೆಳವಣಿಗೆಯೂ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News