Dailyhunt Logo
  • Light mode
    Follow system
    Dark mode
    • Play Story
    • App Story
ಸೂರ್ಯಕುಮಾರ್ ಯಾದವ್‌ಗೆ ಶಾಕ್? ಟಿ20 ನಾಯಕತ್ವದಿಂದ ತೆಗೆದುಹಾಕುವ ಸಾಧ್ಯತೆ!

ಸೂರ್ಯಕುಮಾರ್ ಯಾದವ್‌ಗೆ ಶಾಕ್? ಟಿ20 ನಾಯಕತ್ವದಿಂದ ತೆಗೆದುಹಾಕುವ ಸಾಧ್ಯತೆ!

AIN Kannada 1 week ago

ವದೆಹಲಿ: ಭಾರತ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಅವರ ಭವಿಷ್ಯ ಕುರಿತು ಮಹತ್ವದ ಬೆಳವಣಿಗೆಗಳು ಹೊರಬಿದ್ದಿವೆ.

2026ರ ಐಪಿಎಲ್ ಹಾಗೂ ಪ್ರಸ್ತುತ ಮುಂಬೈ ಟಿ20 ಲೀಗ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲವಾಗಿರುವ ಹಿನ್ನೆಲೆಯಲ್ಲಿ ಅವರನ್ನು ನಾಯಕತ್ವದಿಂದ ಮಾತ್ರವಲ್ಲ, ಟಿ20 ತಂಡದಿಂದಲೂ ಕೈಬಿಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ.

ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಬಿಸಿಸಿಐ ಉನ್ನತ ಅಧಿಕಾರಿಯೊಬ್ಬರು ಈ ಕುರಿತು ಮಾಹಿತಿ ನೀಡಿದ್ದು, ಟಿ20 ತಂಡದ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ನಾಯಕತ್ವ ಬದಲಾವಣೆ ಅನಿವಾರ್ಯವಾಗಿದೆ ಎಂದು ತಿಳಿಸಿದ್ದಾರೆ. ಕೋಚ್ ಗೌತಮ್ ಗಂಭೀರ್ ಹಾಗೂ ಆಯ್ಕೆ ಸಮಿತಿಯೊಂದಿಗೆ ಚರ್ಚೆಯ ಬಳಿಕ ಹೊಸ ನಾಯಕನನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಹೇಳಲಾಗಿದೆ.

ಬಿಸಿಸಿಐ ಮೂಲಗಳ ಪ್ರಕಾರ, "ಸೂರ್ಯ ಅವರ ನಾಯಕತ್ವದಲ್ಲಿ ತಂಡ ಉತ್ತಮ ಯಶಸ್ಸು ಕಂಡಿದ್ದರೂ, ಅವರ ವೈಯಕ್ತಿಕ ಫಾರ್ಮ್ ಕುಸಿತವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಶೀಘ್ರದಲ್ಲೇ ಈ ವಿಷಯವನ್ನು ಅವರಿಗೆ ತಿಳಿಸಲಾಗುವುದು" ಎಂದು ತಿಳಿದುಬಂದಿದೆ.

2024ರಿಂದ ಟಿ20 ನಾಯಕನಾಗಿ ಸೂರ್ಯಕುಮಾರ್ ಭಾರತ ತಂಡವನ್ನು ಹಲವು ಸರಣಿ ಗೆಲುವುಗಳಿಗೆ ಮುನ್ನಡೆಸಿದ್ದರು. ಅವರ ನಾಯಕತ್ವದಲ್ಲಿ ಭಾರತ ಟಿ20 ವಿಶ್ವಕಪ್ ಗೆದ್ದಿದ್ದರೂ, ಇತ್ತೀಚಿನ ವರ್ಷಗಳಲ್ಲಿ ಅವರ ಬ್ಯಾಟಿಂಗ್ ಫಾರ್ಮ್ ಗಮನಾರ್ಹವಾಗಿ ಕುಸಿದಿದೆ ಎಂದು ವರದಿ ಹೇಳುತ್ತದೆ.

2026ರಲ್ಲಿ ಆಡಿದ 14 ಟಿ20 ಪಂದ್ಯಗಳಲ್ಲಿ 484 ರನ್ ಗಳಿಸಿದ್ದರೂ, ಐಪಿಎಲ್ 2026ರಲ್ಲಿ 13 ಇನ್ನಿಂಗ್ಸ್‌ಗಳಲ್ಲಿ ಕೇವಲ 270 ರನ್ ಹಾಗೂ ಒಂದೇ ಅರ್ಧಶತಕ ಅವರ ಪ್ರದರ್ಶನವನ್ನು ಪ್ರಶ್ನಾರ್ಹವಾಗಿಸಿದೆ.

ಈ ನಡುವೆ, ಭಾರತ ಟಿ20 ತಂಡದ ಮುಂದಿನ ನಾಯಕನಾಗಿ ಶ್ರೇಯಸ್ ಅಯ್ಯರ್ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಅವರ ಜೊತೆಗೆ ಶುಭಮನ್ ಗಿಲ್, ಅಕ್ಷರ್ ಪಟೇಲ್, ಇಶಾನ್ ಕಿಶನ್ ಹಾಗೂ ತಿಲಕ್ ವರ್ಮಾ ಹೆಸರುಗಳೂ ಚರ್ಚೆಯಲ್ಲಿವೆ. ಆದರೆ ನಾಯಕತ್ವ ಅನುಭವ ಹಾಗೂ ಐಪಿಎಲ್ ಯಶಸ್ಸಿನ ಹಿನ್ನೆಲೆ ಕಾರಣದಿಂದ ಶ್ರೇಯಸ್ ಅಯ್ಯರ್ ಅವರಿಗೆ ಹೆಚ್ಚಿನ ಅವಕಾಶ ಇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News