Dailyhunt
ತಮಿಳುನಾಡಲ್ಲಿ ಸಿಎಂ ಕನಸು ಕಂಡಿದ್ದ ವಿಜಯ್ ಗೆ ಶಾಕ್! ಡಿಎಂಕೆ-ಎಐಎಡಿಎಂಕೆ ಮೈತ್ರಿ ಆಗುತ್ತಾ?

ತಮಿಳುನಾಡಲ್ಲಿ ಸಿಎಂ ಕನಸು ಕಂಡಿದ್ದ ವಿಜಯ್ ಗೆ ಶಾಕ್! ಡಿಎಂಕೆ-ಎಐಎಡಿಎಂಕೆ ಮೈತ್ರಿ ಆಗುತ್ತಾ?

AIN Kannada 6 days ago

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಜನಾದೇಶ ಹೊರಬಂದ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ ಕ್ಷಣಕ್ಷಣಕ್ಕೂ ನಾಟಕೀಯ ಬೆಳವಣಿಗೆಗಳು ನಡೆಯುತ್ತಿವೆ.

ವಿಜಯ್ ನೇತೃತ್ವದ ಟಿವಿಕೆ ಬಹುಮತ ಸಾಬೀತುಪಡಿಸಲು ವಿಫಲವಾದ ಬೆನ್ನಲ್ಲೇ ಡಿಎಂಕೆ ಮತ್ತು ಎಐಎಡಿಎಂಕೆ ನಡುವೆ ಮೈತ್ರಿ ಮಾತುಕತೆ ಆರಂಭವಾಗಿದೆ ಎನ್ನಲಾಗಿದೆ.

ಚುನಾವಣೆಯಲ್ಲಿ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ, ಸರ್ಕಾರ ರಚಿಸಲು ಅಗತ್ಯವಿರುವ 118 ಸ್ಥಾನಗಳ ಬಹುಮತವನ್ನು ಸಾಧಿಸಲು ಸಾಧ್ಯವಾಗಿಲ್ಲ. ಇತ್ತ ಡಿಎಂಕೆ 59 ಮತ್ತು ಎಐಎಡಿಎಂಕೆ 47 ಸ್ಥಾನಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್, ಪಿಎಂಕೆ, ಐಯುಎಂಎಲ್, ಸಿಪಿಐ, ಸಿಪಿಐ(ಎಂ) ಸೇರಿದಂತೆ ಇತರ ಪಕ್ಷಗಳು ಕೆಲವೇ ಸ್ಥಾನಗಳಲ್ಲಿ ಜಯಗಳಿಸಿವೆ.

ಸರ್ಕಾರ ರಚನೆಗೆ ಟಿವಿಕೆ ನಾಯಕ ವಿಜಯ್ ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದರೂ, ಅಗತ್ಯ ಸಂಖ್ಯಾ ಬಲ ತೋರಿಸಲು ಸಾಧ್ಯವಾಗದೆ ನಿರಾಶರಾದರು. ಹೀಗಾಗಿ ಸರ್ಕಾರ ರಚನೆ ಪ್ರಕ್ರಿಯೆ ಇನ್ನಷ್ಟು ಸಂಕೀರ್ಣವಾಗಿದೆ.

ಇದರ ಮಧ್ಯೆ ಎಐಎಡಿಎಂಕೆ, ಟಿವಿಕೆಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಡಿಎಂಕೆ ಜೊತೆ ಮೈತ್ರಿ ಸಾಧ್ಯತೆಗಳ ಬಗ್ಗೆ ಚರ್ಚೆ ನಡೆಸುತ್ತಿದೆ ಎನ್ನಲಾಗಿದೆ. ಈ ಬೆಳವಣಿಗೆ ಟಿವಿಕೆಗೆ ದೊಡ್ಡ ಹೊಡೆತ ನೀಡಿದೆ.

ಒಟ್ಟಾರೆ, ಅತಂತ್ರ ಜನಾದೇಶದ ನಡುವೆ ತಮಿಳುನಾಡು ರಾಜಕೀಯದಲ್ಲಿ ಹೊಸ ಮೈತ್ರಿ ಸಮೀಕರಣಗಳು ರೂಪುಗೊಳ್ಳುತ್ತಿದ್ದು, ಮುಂದಿನ ಕೆಲ ದಿನಗಳಲ್ಲಿ ಸರ್ಕಾರ ರಚನೆ ಕುರಿತು ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News