
ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಸುಮಾರು 45ಕ್ಕೂ ಅಧಿಕ ಜನರು ಪ್ರಾಣ ಕಳೆದುಕೊಂಡಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ. ಹೀಗಾಗಿ ಅಲ್ಲಿನ ಪ್ರವಾಹದಲ್ಲಿ ಸಿಲುಕಿರುವ ಕನ್ನಡ ನೆರವಿಗಾಗಿ ರಾಜ್ಯ ಸರ್ಕಾರ ಹೆಲ್ಪ್ಲೈನ್ ಸ್ಥಾಪಿಸಿದೆ.ನೆರೆಯಿಂದ ಸಿಲುಕಿಕೊಂಡಿರುವ ಕನ್ನಡಿಗರು ಹೆಲ್ಪ್ ಡೆಸ್ಕ್ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದ್ದು, ಉತ್ತರಾಖಂಡ ಅಧಿಕಾರಿಗಳಿಗೆ ಮಾಹಿತಿಯನ್ನು ರವಾನಿಸಿ ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ಅದಲ್ಲದೆ ಹೆಲ್ಪ್ ಲೈನ್ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದ ಎಂದು ರಾಜ್ಯ ಸರ್ಕಾರ ಹೇಳಿದೆ
Share