Dailyhunt Logo
  • Light mode
    Follow system
    Dark mode
    • Play Story
    • App Story
Wayanad landslide: ವಯನಾಡಿನಲ್ಲಿ ಮೇಘಸ್ಫೋಟ! ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನೋದು ಗ್ಯಾರಂಟಿ

Wayanad landslide: ವಯನಾಡಿನಲ್ಲಿ ಮೇಘಸ್ಫೋಟ! ವಿಡಿಯೋ ನೋಡಿದ್ರೆ ಎದೆ ಝಲ್‌ ಅನ್ನೋದು ಗ್ಯಾರಂಟಿ

AIN Kannada 1 week ago

ತಿರುವನಂತಪುರಂ: ಕೇರಳದ ವಯನಾಡಿನಲ್ಲಿ ಮತ್ತೆ ಭೂಕುಸಿತ ಸಂಭವಿಸಿದ್ದು, ಭಾರೀ ಮಳೆಯಿಂದ ಉಂಟಾದ ಅವಘಡದಲ್ಲಿ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ. ಇದರಿಂದ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಆತಂಕ ಎದುರಾಗಿದೆ.

ವಯನಾಡಿನ ಮೆಪ್ಪಾಡಿ ಪ್ರದೇಶದಲ್ಲಿರುವ ಸುರಂಗ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ಮೀನಾಕ್ಷಿ ಸೇತುವೆ ಸಮೀಪ ಈ ಭೂಕುಸಿತ ಸಂಭವಿಸಿದೆ. ಭಾರೀ ಮಳೆಯಿಂದಾಗಿ ಏಕಾಏಕಿ ಗುಡ್ಡ ಕುಸಿದ ಪರಿಣಾಮ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: AIN Live News