ರಾಜ್ ಕೋಟ್ : ಕೊರೊನಾ ಭೀಕರತೆ ಎಲ್ಲರನ್ನೂ ಅಲುಗಾಡಿಸಿಬಿಟ್ಟಿದೆ. ಅದರಲ್ಲೂ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದೇ ಜನರ ಬದಕು ಬೀದಿಪಾಲಾಗಿದೆ. ಇದಕ್ಕೆ ನಿದರ್ಶನ ಎಂಬಂತೆ ರೋಗಿಗಳು ರಸ್ತೆ ಬದಿಯಲ್ಲೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಗುಜರಾತ್ನಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇವೆ.
ರೋಗಿಗಳಿಗೆ ಒಂದೆಡೆ ಬೆಡ್ ಸಿಗುತ್ತಿಲ್ಲ. ಮತ್ತೊಂದೆಡೆ ಆಮ್ಲಜನಕ ಸಿಗುತ್ತಿಲ್ಲ. ಈ ಹಿನ್ನೆಲೆ ರೋಗಿಗಳು ಸಾವು ಬದುಕಿನ ಜೊತೆ ಬೀದಿ ಬದಿಯಲ್ಲಿ ಅಲೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಕೋಟ್ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಿಂದ ಹೆಚ್ಚಿನ ಸಂಖ್ಯೆಯ ಜನರು ಚಿಕಿತ್ಸೆಗಾಗಿ ಬರುತ್ತಿದ್ದಾರೆ.
ರಾಜ್ಕೋಟ್ನಲ್ಲಿ ಸರ್ಕಾರಿ ಆಸ್ಪತ್ರೆಗಳ ಕೊರತೆ ಇದ್ದು, ಚಿಕಿತ್ಸೆಗಾಗಿ ಆಸ್ಪತ್ರೆ ಮುಂದೆ ರೋಗಿಗಳು ಸರತಿ ಸಾಲಲ್ಲಿ ನಿಲ್ಲುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
Share
Continue Reading

