ಬೆಳಗಾವಿ : ರಾಜ್ಯದಲ್ಲಿ ಕೊರೊನಾ ಕಾಟದ ಮಧ್ಯೆ ಬ್ಲಾಕ್ ಫಂಗಸ್ ಸೋಂಕು ಕೂಡ ಹೆಚ್ಚಾಗುತ್ತಿದೆ. ಕೊರೊನಾದಿಂದ ಚೇತರಿಸಿಕೊಂಡವರಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ಮಧ್ಯೆ ಬೆಳಗಾವಿಯಲ್ಲಿ ಬ್ಯ್ಲಾಕ್ ಫಂಗಸ್ ಗೆ ಮೊದಲ ಬಲಿಯಾಗಿದೆ ಎಂದು ತಿಳಿದು ಬಂದಿದೆ. ಅಥಣಿ ತಾಲೂಕಿನ ಜಂಬಗಿ ಗ್ರಾಮದ ನಿವಾಸಿಯಾಗಿರುವ ಸಮೀರ ಅಬ್ದುಲ್ ಚೌಧರಿ (41) ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದು, ಮೇ 15 ಕ್ಕೆ ವಿಜಯಪುರದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ತಡವಾಗಿ ಬೆಳಕಿಗೆ ಬಂದಿದೆ..
Share
Continue Reading

