Monday, 21 Sep, 11.10 am All Indian News 24x7

ರಾಷ್ಟೀಯ
ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಆರೋಗ್ಯ ಸ್ಥಿತಿ ಗಂಭೀರ :ಐಸಿಯುಗೆ ದಾಖಲು

ಪಟ್ನಾ : ಆ.24 ರಂದು ತೀವ್ರ ಅನಾರೋಗ್ಯದಿಂದ ದೆಹಲಿಯ ಆಸ್ಪತ್ರೆಯೊಂದಕ್ಕೆ ದಾಖಲಾಗಿರುವ ಕೇಂದ್ರ ಸಚಿವ ರಾಮ್ ‌ವಿಲಾಸ್‌ ಪಾಸ್ವಾನ್‌ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಈ ಹಿನ್ನೆಲೆ ಅವರನ್ನು ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿದೆ. ಬಿಹಾರ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಭರದಿಂದ ಸಾಗಿವೆ.

ಎಲ್ಲಾ ರಾಜಕೀಯ ಪಕ್ಷಗಳು ಚುನಾವಣೆಯಲ್ಲಿ ಸಕ್ರಿಯವಾಗಿದ್ದು, ಮತದಾರರನ್ನು ತಮ್ಮತ್ತ ಸೆಳೆಯಲು ಕಾರ್ಯತಂತ್ರ ರೂಪಿಸುತ್ತಿವೆ. ಆದ್ರೆ ಲೋಕ ಜನಶಕ್ತಿ ಪಕ್ಷ (ಎಲ್​ಜೆಪಿ) ಅಷ್ಟೊಂದು ಸಕ್ರೀಯವಾಗಿಲ್ಲ. ಕಾರಣ ಎಲ್​ಜೆಪಿ ಮುಖ್ಯಸ್ಥ ಚಿರಾಗ್​ ಪಾಸ್ವಾನ್​ ಪ್ರಸ್ತುತ ದೆಹಲಿಯ ಆಸ್ಪತ್ರೆಯಲ್ಲಿ ತಂದೆಯೊಂದಿಗೆ ಇದ್ದು, ಮಗನ ಕರ್ತವ್ಯವನ್ನು ನಿಭಾಯಿಸುತ್ತಿದ್ದಾರೆ.

ಕಳೆದ ಮೂರು ವಾರಗಳಿಂದ ದೆಹಲಿಯ ಆಸ್ಪತ್ರೆಯಲ್ಲಿ ಸಚಿವ ರಾಮ್‌ವಿಲಾಸ್‌ ಪಾಸ್ವಾನ್‌ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿರಾಗ್ ಪಾಸ್ವಾನ್ ಅವರು ಪಕ್ಷದ ಕಾರ್ಯಕರ್ತರಿಗೆ ಪತ್ರವೊಂದನ್ನು ಬರೆದಿದ್ದು, ಬಿಹಾರದ ಚುನಾವಣಾ ತಯಾರಿಯಲ್ಲಿ ಅವರು ಗೈರುಹಾಜರಾಗಲು ಕಾರಣವೇನು ಎಂಬುದನ್ನು ಉಲ್ಲೇಖಿಸಿದ್ದಾರೆ.

'

ಇಂದು ಅವರು (ರಾಮ್ ವಿಲಾಸ್ ಪಾಸ್ವಾನ್) ನನಗೆ ಹೆಚ್ಚು ಅಗತ್ಯವಿರುವಾಗ, ನಾನು ಅವರೊಂದಿಗೆ ಇರಬೇಕು. ಇಲ್ಲದಿದ್ದರೆ ನನ್ನನ್ನು ಕ್ಷಮಿಸಲು ನನಗೆ ಸಾಧ್ಯವಾಗುವುದಿಲ್ಲ. ಅವರಿಗೆ ಬಿಹಾರಕ್ಕೆ ಹೋಗುವ ಇಚ್ಛೆ ಇತ್ತು. ಅಲ್ಲಿ ಎನ್‌ಡಿಎ ಒಳಗಿನ ಸೀಟು ಹಂಚಿಕೆ ಚರ್ಚೆಯನ್ನು ಅಂತಿಮಗೊಳಿಸುವ ಬಯಕೆ ಇತ್ತು. ಆದರೆ, ಅನಾರೋಗ್ಯದ ಕಾರಣದಿಂದ ಇದು ಸಾಧ್ಯವಾಗಲಿಲ್ಲ. ಈ ಸಂದರ್ಭದಲ್ಲಿ ನಾನೂ ಅವರನ್ನು ಏಕಾಂಗಿಯಾಗಿ ಬಿಟ್ಟು ಬರಲು ಸಾಧ್ಯವಿಲ್ಲ' ಎಂದು ಚಿರಾಗ್ ಪಾಸ್ವಾನ್ ಪತ್ರ ಬರೆದಿದ್ದಾರೆ.

ಕಳೆದ ವರ್ಷ ನಮ್ಮ ತಂದೆ ಹೃದಯ ಶಸ್ತ್ರಚಿಕಿತ್ಸೆಗೊಳಗಾಗಿದ್ದರು. ನಂತರ ಅವರು ನಿಯಮಿತವಾಗಿ ಆರೋಗ್ಯ ತಪಾಸಣೆಗೆ ಒಳಗಾಗುತ್ತಿದ್ದರು. ಕೋವಿಡ್‌-19 ಸಂದರ್ಭದಲ್ಲಿ ಆಹಾರ ಸಚಿವರಾಗಿರುವ ನನ್ನ ತಂದೆ ಕಳೆದ ಐದು ತಿಂಗಳಿಂದ ಬಡವರಿಗೆ ಮತ್ತು ಅಗತ್ಯವಿದ್ದವರಿಗೆ ಪಡಿತರ ತಲುಪುವಂತೆ ನೋಡಿಕೊಳ್ಳುವುದರಲ್ಲಿ ನಿರತರಾಗಿದ್ದರು. ಈ ಕಾರಣದಿಂದಾಗಿ, ಆರೋಗ್ಯದ ಮೇಲೆ ಗಮನಹರಿಸಲು ಅವರಿಗೆ ಸಾಧ್ಯವಾಗಿರಲಿಲ್ಲ. ಪ್ರಸ್ತುತ ಅವರು ದೆಹಲಿಯ ಆಸ್ಪತ್ರೆಯಲ್ಲಿ ಕಳೆದ ಮೂರು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಚಿರಾಗ್ ಪಾಸ್ವಾನ್ ಪತ್ರದಲ್ಲಿ ಬರೆದಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: allindiannews.com
Top