ಮಂಡ್ಯ :ಕೊರೊನಾ 2 ಅಲೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಜನತಾ ಕರ್ಫ್ಯೂ ಗೆ ಜಿಲ್ಲಾದ್ಯಂತ ಬುಧವಾರ ಉತ್ತಮ ಪ್ರತಿಕ್ರಿಯೆ ಕಂಡು ಬಂದಿತು.ಬೆಳಗ್ಗೆ 6 ರಿಂದ 10 ಗಂಟೆಯ ತನಕ ಅಗತ್ಯ ವಸ್ತುಗಳ ಅಂಗಡಿಗಳು ಮಾತ್ರ ತೆರೆದಿತ್ತು 10 ಗಂಟೆಯ ನಂತರ ಔಷಧಿ ಅಂಗಡಿ, ಆಸ್ಪತ್ರೆಗಳನ್ನು ಹೊರತು ಪಡಿಸಿ ಉಳಿದೆಲ್ಲ ಅಂಗಡಿಗಳು ಸಂಪೂರ್ಣವಾಗಿ ಬಂದ್ ಮಾಡುವ ಮೂಲಕ ಜನತಾ ಕರ್ಫ್ಯೂ ಗೆ ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಿದರು.
10 ಗಂಟೆಯೊಳಗೆ ಮಾತ್ರ ಅಗತ್ಯ ವಸ್ತುಗಳ ಅಂಗಡಿಗೆ ಅನುಮತಿ ನೀಡಿದ್ದ ಕಾರಣ ಮಾಂಸದ ಅಂಗಡಿಗಳಲ್ಲಿ ಖರೀದಿ ಜೋರಾಗಿತ್ತು. ದಿನಸಿ ಅಂಗಡಿ, ತರಕಾರಿ ಅಂಗಡಿಗಳಲ್ಲಿ ಜನರು ತರಾತುರಿಯಲ್ಲಿ ವಸ್ತುಗಳನ್ನು ಖರೀದಿ ಮಾಡುತ್ತಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು.
ಪೊಲೀಸರಿಂದ ದಂಡ : 10 ಗಂಟೆಯ ನಂತರ ನಗರದ ವಿವಿಧೆಡೆ ಅನಗತ್ಯವಾಗಿ ಬೈಕ್ಗಳಲ್ಲಿ ಸಂಚಾರ ಮಾಡುತ್ತಿದ್ದ ಮತ್ತು ಕರೊನಾ ನಿಯಗಳನ್ನು ಪಾಲಿಸದ ಸಾರ್ವಜನಿಕರಿಗೆ ಹಾಗೂ 10 ಗಂಟೆಯ ನಂತರ ಅಂಗಡಿ ಬಾಗಿಲು ಮುಚ್ಚದಿರುವ ಅಂಗಡಿ ಮಾಲೀಕರಿಗೆ ಪೊಲೀಸರು ದಂಡ ವಿಧಿಸುವ ಮೂಲಕ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಜಾಗೃತಿ ಮೂಡಿಸಿದರು.
ವರದಿ :ಗಿರೀಶ್ ರಾಜ್ ಮಂಡ್ಯ
Share
Continue Reading

