Monday, 21 Sep, 11.13 am All Indian News 24x7

ಬೆಂಗಳೂರು ನಗರ
ರಾಜ್ಯದಲ್ಲಿ 8191 ಮಂದಿಗೆ ಕೊರೊನಾ..!ಬಲಿಯಾದವರ ಸಂಖ್ಯೆ ಎಷ್ಟು ಗೊತ್ತಾ..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಲೇ ಇದ್ದು, ನಿನ್ನೆ ಕೂಡ 60,477 ಜನರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, 8191 ಸೋಂಕು ದೃಢಪಟ್ಟಿದೆ. ಈ ಮೂಲಕ 5,19,537ಕ್ಕೆ ಸೋಂಕಿತರ ಸಂಖ್ಯೆ ಏರಿಕೆ ಆಗಿದೆ.

ಇತ್ತ 8611 ಗುಣಮುಖರಾಗಿದ್ದು 4,13,452 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಸಕ್ರಿಯ ಪ್ರಕರಣಗಳು 98,043 ಇದ್ದು, ಇದರಲ್ಲಿ 811 ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿಗೆ 101 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 8023 ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ.

ಇತ್ತ ಸೋಂಕಿತರ ನೇರ ಸಂಪರ್ಕದಲ್ಲಿ 5,52,378. ದ್ವಿತೀಯ ಹಂತದಲ್ಲಿ 5,00,209 ಮಂದಿ ಸಂಪರ್ಕದಲ್ಲಿ ಇದ್ದಾರೆ. ಹಾಗೆಯೇ 5,09,512 ಮಂದಿ ಕಳೆದ 14 ದಿನಗಳಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: allindiannews.com
Top