Tuesday, 20 Apr, 2.20 pm All Indian News 24x7

ಬೆಂಗಳೂರು ನಗರ
ರಾಜ್ಯಪಾಲರ ಸಭೆ ಬಳಿಕ ಖಂಡಿತವಾಗಿಯೂ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಯಾಗಲಿದೆ :ಸಚಿವ ಆರ್.ಅಶೋಕ್

ಬೆಂಗಳೂರು : ರಾಜ್ಯಪಾಲರ ಜತೆ ಸಭೆ ಮುಗಿದ ಬಳಿಕ, ಖಂಡಿತವಾಗಿಯೂ ರಾಜ್ಯದಲ್ಲಿ ಟಫ್‌ ರೂಲ್ಸ್ ಜಾರಿಯಾಗಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯಪಾಲರು ಇವತ್ತು ವರ್ಚುವಲ್ ಸಭೆ ಕರೆದಿದ್ದಾರೆ. ಸಿಎಂ, ವಿಪಕ್ಷ ನಾಯಕರು, ಅಧಿಕಾರಿಗಳು, ಸಚಿವರಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಎಲ್ಲಾ ರಾಜ್ಯದ ರಾಜ್ಯಪಾಲರಿಗೆ ಕೇಂದ್ರ ಸರ್ಕಾರ ಸೂಚನೆ‌ ನೀಡಿದೆ. ಕೋವಿಡ್ ನಿರ್ವಹಣೆಯಲ್ಲಿ ಗವರ್ನರ್ ಕೂಡ ಭಾಗಿಯಾಗಬೇಕು ಎಂದು ಕೇಂದ್ರ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಇದಕ್ಕೆ ಕಾಂಗ್ರೆಸ್​ನವರು ಯಾವುದೇ ಅರ್ಥ ಕಲ್ಪಿಸೋದು ಬೇಡ. ಎಲ್ಲಾ ರಾಜ್ಯಗಳಲ್ಲಿ ರಾಜ್ಯಪಾಲರು ಈ‌ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಸಂಸದ ತೇಜಸ್ವಿಸೂರ್ಯ ಕೇಂದ್ರ ಸಚಿವರ ಜೊತೆ ಮಾತನಾಡಿದ್ದಾರೆ. ಎಲ್ಲೆಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್ ದಾಸ್ತಾನಿಗೆ ಅವಕಾಶವಿದೆಯೋ ಅದನ್ನು ಕೊಡಿಸಲಾಗುವುದು. ಸಿಲಿಂಡರ್ ಮೂಲಕವೇ ಆಗಬೇಕಾದ ಕಡೆಗೆ ಖಾಲಿ ಸಿಲಿಂಡರ್​ಗಳನ್ನು ವಿತರಿಸಿ, ಆ ಮೂಲಕವೂ ದಾಸ್ತಾನಿಗೆ ಕ್ರಮ ಕೈಗೊಳ್ಳಲು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ಸರ್ಕಾರ ಈ ನಿಟ್ಟಿನಸ್ಸಿ ಪೂರಕ ವ್ಯವಸ್ಥೆ ಮಾಡಿದೆ ಎಂದು ತಿಳಿಸಿದರು.

Share

Continue Reading

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: allindiannews.com
Top