Dailyhunt
ಕೊರೊನಾ ವ್ಯಾಕ್ಸಿನ್ ಗೊಂದಲ ನಿವಾರಣೆಗೆ ಸಂಜೆ ಸಿಎಂ ಮಹತ್ವದ ಸುದ್ದಿಗೋಷ್ಠಿ

ಕೊರೊನಾ ವ್ಯಾಕ್ಸಿನ್ ಗೊಂದಲ ನಿವಾರಣೆಗೆ ಸಂಜೆ ಸಿಎಂ ಮಹತ್ವದ ಸುದ್ದಿಗೋಷ್ಠಿ

AIN Kannada 4 years ago

ಬೆಂಗಳೂರು : ಕೊರೊನಾ ವ್ಯಾಕ್ಸಿನ್ ಗೊಂದಲ ನಿವಾರಣೆ ಕುರಿತಂತೆ ಸಂಜೆ 5 ಗಂಟೆಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸಿಎಂ ಕೋವಿಡ್ ಉಸ್ತುವಾರಿ ಸಚಿವರ ಜೊತೆಯಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ವೇಳೆ ಲಸಿಕೆ ಕೊರತೆ ಬಗ್ಗೆ ಇರುವ ಎಲ್ಲ ಗೊಂದಲಗಳ ಕುರಿತು ಸ್ಪಷ್ಟನೆ ನೀಡಲಿದ್ದಾರೆ.

ಈಗಾಗಲೇ ಆರೋಗ್ಯ ಇಲಾಖೆ ಮುಂದಿನ ಆದೇಶದವರೆಗೆ 18-44ರ ವಯೋಮಾನದವರಿಗೆ ಲಸಿಕೆ ನೀಡಿಕೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ. ಆದರೂ 45 ವರ್ಷ ಮೇಲಿನವರಿಗೆ ಲಸಿಕೆ ಸಿಗುತ್ತಿಲ್ಲ. ಮೊದಲನೇ ಡೋಸ್ ಪಡೆದವರು ಎರಡನೇ ಡೋಸ್ ಪಡೆಯಲು ಸಾಧ್ಯವಾಗುತ್ತಿಲ್ಲ. ಬಹುತೇಕ ಕಡೆ ಲಸಿಕೆ ಖಾಲಿ ಎನ್ನುವ ನಾಮಫಲಕ ಕಂಡುಬರುತ್ತಿದೆ.

18-44 ವಯೋಮಾನದವರಿಗೆ ಲಸಿಕೆ ನೀಡಿಕೆಯನ್ನು ಸ್ಥಗಿತಗೊಳಿಸುವ ಕುರಿತು ಸಿಎಂ ಅಧಿಕೃತ ಘೋಷಣೆ ಮಾಡಲಿದ್ದು, ಮುಂದಿನ ದಿನಾಂಕ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಲಾಕ್​ಡೌನ್ ನಂತರವೂ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ಹೀಗಾಗಿ ಇನ್ನಷ್ಟು ಬಿಗಿ ಕ್ರಮದ ಘೋಷಣೆ ಸಾಧ್ಯತೆ ಇದೆ. ಇದರ ಜೊತೆಯಲ್ಲಿ ಶ್ರಮಿಕ ವರ್ಗದ ನೆರವಿಗೆ ಏನಾದರೂ ಯೋಜನೆಗಳನ್ನು ಪ್ರಕಟಿಸಬಹುದು.

Share

Continue Reading

Dailyhunt
Disclaimer: This content has not been generated, created or edited by Dailyhunt. Publisher: AIN Live News