Dailyhunt Logo
  • Light mode
    Follow system
    Dark mode
    • Play Story
    • App Story

ಆತ್ಮಹತ್ಯೆಯ ಹಾಟ್‌ಸ್ಪಾಟ್ ಆಗುತ್ತಿದೆ ಪ್ರಸಿದ್ದ ವೆಲ್ಲೆಸ್ಲಿ ಸೇತುವೆ

ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್‌ಸ್ಪಾಟ್‌ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ.

ಕಳೆದ ತಡರಾತ್ರಿ ಸೇತುವೆ ಮೇಲಿಂದ ನದಿಗೆ ಧುಮುಕಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಯತ್ನಿಸಿರುವ ಘಟನೆ ನಡೆದಿದೆ.

ಮೈಸೂರಿನ ಮೇಟಗಳ್ಳಿ ನಿವಾಸಿ ಶಿವಕುಮಾರ್ ಎಂಬುವವರೇ ಆತ್ಮಹತ್ಯೆಗೆ ಯತ್ನಿಸಿ ಗಾಯಗೊಂಡ ವ್ಯಕ್ತಿಯಾಗಿದ್ದು, ಸದ್ಯ ಅವರು ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಕುಮಾರ್ ಅವರು ನದಿಗೆ ಬೀಳಲು ಹೋಗಿ ನದಿ ಪಕ್ಕ ಬಂಡೆಗೆ ಬಿದ್ದು ನರಳಾಟ ನಡೆಸಿದ್ದು, ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಶಿವಕುಮಾರ್‌ರನ್ನು ರಕ್ಷಣೆ ಮಾಡಿದ್ದಾರೆ.

ಕಳೆದ ಒಂದು ವಾರದಲ್ಲಿ ಈ ಸೇತುವೆ ಮೇಲಿಂದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಅದರಲ್ಲಿ ಇಬ್ಬರು ಸಾವನ್ನಪ್ಪಿದರೆ, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Andolana