Dailyhunt Logo
  • Light mode
    Follow system
    Dark mode
    • Play Story
    • App Story

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.

ಸ್ಫೋಟದ ಬಳಿಕ ನಿಷೇಧಿತ ಬಲೂಚ್ ಲಿಬರೇಶನ್ ಆರ್ಮಿ ಕೃತ್ಯದ ಹೊಣೆಯನ್ನು ಹೊತ್ತುಕೊಂಡಿದೆ.

ಪಾಕಿಸ್ತಾನ ಮಿಲಿಟರಿ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ನಡೆಸಿದ ದಾಳಿ ಇದಾಗಿದೆ ಎಂದು ಬಲೂಚ್ ಲಿಬರೇಶನ್ ಆರ್ಮಿ ಹೇಳಿದೆ. ಸ್ಫೋಟದ ಬಳಿಕ ಸ್ಥಳದಲ್ಲಿ ಭಾರೀ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಾಂಬ್ ಸ್ಫೋಟದ ಪರಿಣಾಮ ರೈಲ್ವೆ ಟ್ರ್ಯಾಕ್ ಬಳಿಯ ಮನೆಗಳಲ್ಲಿ ಪಾರ್ಕ್ ಮಾಡಿದ್ದ ಹತ್ತಾರು ವಾಹನಗಳು ಬೆಂಕಿಗೆ ಆಹುತಿಯಾಗಿವೆ. ಅಲ್ಲದೇ ಮನೆಗಳ ಕಿಟಕಿಗಳು ಪುಡಿಯಾಗಿದೆ.

ರೈಲು ಕಂಟೋನ್ಮೆಂಟ್‌ನಿಂದ ತೆರಳುತ್ತಿದ್ದ ವೇಳೆ ಬಲೂಚಿಸ್ತಾನ ಪ್ರದೇಶದ ಕ್ವೆಟ್ಟಾದ ಚೆಮನ್ ಫಾಟಕ್ ಬಳಿ ಆತ್ಮಾಹುತಿ ಬಾಂಬ್ ಸ್ಫೋಟಗೊಂಡಿದೆ. ಬಾಂಬ್ ಸ್ಫೋಟದ ಪರಿಣಾಮ ರೈಲಿನ ಹಲವು ಬೋಗಿಗಳು ಹಳಿತಪ್ಪಿದ್ದು, ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ರೈಲ್ವೆ, ಪೊಲೀಸ್ ಹಾಗೂ ಭದ್ರತಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದ್ದು, ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Andolana