Dailyhunt

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್ ನೇತೃತ್ವದಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಸಭೆಯಲ್ಲಿ ಭಾರತ ಭಾಗವಹಿಸುತ್ತಿದೆ.

ಈ ಕುರಿತು ಭಾರತ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಾತ್ರಿಪಡಿಸಿದೆ.

ಬ್ರಿಟನ್‌ನ ವಿದೇಶ ಸಚಿವೆ ಯುವೆಟ್ ಕೂಪರ್ ನೇತೃತ್ವದಲ್ಲಿ ನಡೆಯುತ್ತಿರುವ ಈ ಸಭೆಯಲ್ಲಿ 35 ರಿಂದ 40ಕ್ಕೂ ಹೆಚ್ಚು ದೇಶಗಳ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ. ಹೊರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ನೌಕಾ ಸಂಚಾರವನ್ನು ಖಚಿತಪಡಿಸುವುದು ಮತ್ತು ಜಲಸಂಧಿಯನ್ನು ಮತ್ತೆ ತೆರೆಯುವುದಕ್ಕೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ.

37ಕ್ಕೂ ಹೆಚ್ಚು ದೇಶಗಳು ಹೊರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಂಚಾರಕ್ಕೆ ಬೆಂಬಲ ನೀಡುವ ಘೋಷಣೆಯಲ್ಲಿ ಸಹಿ ಹಾಕಿವೆ ಎಂದು ತಿಳಿದು ಬಂದಿದೆ. ಆದರೆ, ಈ ಸಭೆಯಲ್ಲಿ ಅಮೆರಿಕ ಭಾಗವಹಿಸುತ್ತಿಲ್ಲ ಎಂದು ವರದಿಗಳು ಹೇಳಿವೆ.

Dailyhunt
Disclaimer: This content has not been generated, created or edited by Dailyhunt. Publisher: Andolana