Dailyhunt Logo
  • Light mode
    Follow system
    Dark mode
    • Play Story
    • App Story

ಹುಣಸೂರು| ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ: ಮೂವರಿಗೆ ಗಾಯ

ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ ಹತ್ತಿಮರ ಬೀದಿಯಲ್ಲಿ ನಡೆದಿದೆ.

ಸಾಕಮ್ಮ, ರಮೇಶ್ ನಾಯಕ ಹಾಗೂ ಶ್ರೀನಿವಾಸ್ ಎಂಬುವವರಿಗೆ ಗಾಯಗಳಾಗಿದ್ದು, ವಿದ್ಯಾ ಹಾಗೂ ಅವರ ಪತಿ ಶಿವಕುಮಾರ್ ವಿರುದ್ಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಕಮ್ಮ ಅವರಿಗೆ ಸೇರಿದ ನಿವೇಶನದಲ್ಲಿ ಮಣ್ಣು ಹಾಕಲಾಗಿತ್ತು. ಮಣ್ಣು ರಸ್ತೆಗೆ ಹರಡಿಕೊಂಡಿತ್ತು. ಇದನ್ನು ತೆರವುಗೊಳಿಸುವಂತೆ ಗಲಾಟೆ ನಡೆದಿದ್ದು, ಒಬ್ಬರಿಗೊಬ್ಬರು ಬಡಿದಾಡಿಕೊಂಡಿದ್ದಾರೆ. ಗಾಯಾಳುಗಳನ್ನು ಹುಣಸೂರಿನ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹುಣಸೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Andolana