ಚಾಮರಾಜನಗರ: ರಾಜ್ಯಾದ್ಯಂತ ಕೋವಿಡ್ ನಿಯಂತ್ರಣಕ್ಕಾಗಿ ಲಾಕ್‌ಡೌನ್ ಹೇರಲಾಗಿದ್ದರೂ, ನಿಯಮವನ್ನು ಉಲ್ಲಂಘಿಸಿ ಬಿಜೆಪಿ ನಾಯಕರೊಬ್ಬರು ತಮ್ಮ ಪುತ್ರನ ಮದುವೆ ಮಾಡಲು ಮುಂದಾಗಿದ್ದರು ಎನ್ನುವ ಆರೋಪ ಕೇಳಿಬಂದಿದೆ.
ರಾಜ್ಯ ಬಿಜೆಪಿ ಎಸ್ಟಿ ಮೋರ್ಚಾ ಉಪಾಧ್ಯಕ್ಷ, ಗುಂಡ್ಲುಪೇಟೆ ಪಿ.ಎಲ್. ಡಿ ಬ್ಯಾಂಕ್ ಅಧ್ಯಕ್ಷ ಮಲ್ಲೇಶ್ ಪುತ್ರನ ಮದುವೆಯು ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಪಾರ್ವತಿ ಬೆಟ್ಟದಲ್ಲಿ ನಡೆಯುತ್ತಿತ್ತು.
ಲಾಕ್ ಡೌನ್ ನಿಯಮಗಳ ಪ್ರಕಾರ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ ಹೇರಲಾಗಿದೆ ಆದರೆ, ದೇವಸ್ಥಾನದ ಬಾಗಿಲು ತೆರೆಸಿ ಮದುವೆ ಮಾಡಲಾಗಿತ್ತು ಎಂದು ಹೇಳಲಾಗಿದೆ.
ಈ ಮದುವೆಯಲ್ಲಿ 50ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು ಎಂದು ಹೇಳಲಾಗಿದೆ.
ಕೋವಿಡ್ ಕುರಿತ ಎಲ್ಲಾ ಲೇಟೆಸ್ಟ್ ಅಪ್‌ಡೇಟ್ಸ್ ಓದಿ

