Dailyhunt Logo
  • Light mode
    Follow system
    Dark mode
    • Play Story
    • App Story

ಓದುಗರ ಪತ್ರ: ಚರಂಡಿ ಕಾಮಗಾರಿ ಪೂರ್ಣಗೊಳಿಸಿ

ಮೈಸೂರಿನ ಹಯಗ್ರೀವ ಕಾಲೇಜು ಹಿಂಭಾಗದ ದಿವಾನ್ಸ್ ರಸ್ತೆಯಲ್ಲಿ ಬಾಕ್ಸ್ ಚರಂಡಿ ಕಾಮಗಾರಿ ಅಪೂರ್ಣಗೊಂಡಿದ್ದು, ಕಾಮಗಾರಿಗಾಗಿ ತೆಗೆದಿರುವ ಮಣ್ಣನ್ನು ರಸ್ತೆಯ ಮೇಲೆ ಹಾಕಿರುವುದರಿಂದ ವಾಹನಗಳ ಸಂಚಾರಕ್ಕೆ ,ಜನರಿಗೆ ತೀವ್ರ ತೊಂದರೆಯಾಗಿದೆ. ಮೈಸೂರು ಮಹಾನಗರಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ಎರಡು ವರ್ಷ ಕಳೆದಿದ್ದು, ಅಧಿಕಾರಿಗಳು ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ.

ಚಾಮರಾಜ ಕ್ಷೇತ್ರದ ಶಾಸಕರಾದ ಹರೀಶ್ ಗೌಡರು ಚುನಾವಣೆಯಲ್ಲಿ ಜಯಗಳಿಸಿದ ನಂತರ ಇತ್ತಕಡೆ ಬಂದೇ ಇಲ್ಲ. ಇಲ್ಲಿನ ಜನರು ತಮ್ಮ ಸಮಸ್ಯೆಯನ್ನು ಯಾರ ಬಳಿ ಹೇಳಬೇಕು ಎಂಬುದೇ ತಿಳಿಯದಾಗಿದೆ. ಶಾಸಕರು ಹಾಗೂ ನಗರಪಾಲಿಕೆ ಅಧಿಕಾರಿಗಳು ಈಗಲಾದರೂ ಚರಂಡಿ ಕಾಮಗಾರಿಯನ್ನು ಪೂರ್ಣಗೊಳಿಸಿ, ರಸ್ತೆಯ ಮೇಲೆ ಹರಡಿರುವ ಮಣ್ಣನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕಾಗಿದೆ.

-ಮೀನಾಕ್ಷಿ, ಮೈಸೂರು

Dailyhunt
Disclaimer: This content has not been generated, created or edited by Dailyhunt. Publisher: Andolana