Dailyhunt Logo
  • Light mode
    Follow system
    Dark mode
    • Play Story
    • App Story

ರಾಜ್ಯದಲ್ಲಿ ಮುಂದಿನ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಾಮರಾಜನಗರ, ಕೊಡಗು ಹಾಗೂ ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಾಳಿಯೊಂದಿಗೆ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು. ಗುಡುಗು-ಮಿಂಚು ಕಾಣಿಸಿಕೊಂಡಾಗ ಮರಗಳ ಕೆಳಗೆ ಆಶ್ರಯ ಪಡೆಯದೆ ಸುರಕ್ಷಿತ ಕಟ್ಟಡದಲ್ಲಿ ಉಳಿಯಿರಿ. ರೈತರು ಕೃಷಿ ಚಟುವಟಿಕೆಗಳಿಗೆ ತೆರಳುವ ಮುನ್ನ ಸ್ಥಳೀಯ ಹವಾಮಾನ ಮುನ್ಸೂಚನೆಯನ್ನು ಗಮನಿಸುವುದು ಸೂಕ್ತ ಎಂದು ಎಚ್ಚರಿಕೆ ನೀಡಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Andolana