Dailyhunt Logo
  • Light mode
    Follow system
    Dark mode
    • Play Story
    • App Story

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದೆ.

ನಿನ್ನೆ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ಮತ್ತು ಮಾರ್ತಾಂಡ ಆನೆ ನಡುವೆ ಕಾದಾಟ ನಡೆದಿತ್ತು.

ಈ ವೇಳೆ ಮಾರ್ತಾಂಡ ಆನೆ ಕಾಲ ಕೆಳಗೆ ಸಿಲುಕಿ ಚೆನ್ನೈ ಮೂಲದ ಪ್ರವಾಸಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದರು.

ಕಂಜನ್‌ ಆನೆ ದಾಳಿಯಿಂದ ಮಾರ್ತಾಂಡ ಆನೆಯ ಹೊಟ್ಟೆ ಹಾಗೂ ಕಿವಿ ಹಾಗೂ ಕಾಲಿಗೆ ಗಂಭೀರ ಗಾಯವಾಗಿತ್ತು.

ಗಾಯಗೊಂಡಿದ್ದ ಮಾರ್ತಾಂಡ ಆನೆಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಾರ್ತಾಂಡ ಆನೆ ಸಾವನ್ನಪ್ಪಿದೆ.

Dailyhunt
Disclaimer: This content has not been generated, created or edited by Dailyhunt. Publisher: Andolana