Dailyhunt Logo
  • Light mode
    Follow system
    Dark mode
    • Play Story
    • App Story

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದ್ದು, ಅಂತಿಮ ಹಂತದ ಸಿದ್ಧತೆಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ತೊಡಗಿಸಿಕೊಂಡಿದ್ದಾರೆ.

ದಸರಾ ಉದ್ಘಾಟನೆಗೆ ಗಣ್ಯರು, ಕಲಾವಿದರು ಹಾಗೂ ಸಾವಿರಾರು ಜನರು ಆಗಮಿಸುವ ನಿರೀಕ್ಷೆಯಿರುವುದರಿಂದ, ವೇದಿಕೆ ಮತ್ತು ಸುತ್ತಮುತ್ತಲಿನ ಪ್ರದೇಶವನ್ನು ಅಚ್ಚುಕಟ್ಟಾಗಿ ಸಿದ್ಧಪಡಿಸಲಾಗುತ್ತಿದೆ. ಕಾರ್ಯಕ್ರಮ ಸುಗಮವಾಗಿ ನಡೆಯಲು ಅಗತ್ಯವಾದ ವ್ಯವಸ್ಥೆಗಳನ್ನೂ ಕೈಗೊಳ್ಳಲಾಗುತ್ತಿದೆ.

ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ನಡೆಯಲಿರುವ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಮೈಸೂರಿನಲ್ಲಿ ನಾಡಹಬ್ಬದ ಸಂಭ್ರಮ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

Dailyhunt
Disclaimer: This content has not been generated, created or edited by Dailyhunt. Publisher: Andolana