Dailyhunt
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಸಂಜೆ 5ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಸಂಜೆ 5ರವರೆಗೆ ವ್ಯಾಪಾರ ವಹಿವಾಟಿಗೆ ಅವಕಾಶ

ಮಂಗಳೂರು: ದಕ್ಷಿಣ ಕನ್ನಡ ಕೋವಿಡ್ ಪಾಸಿಟಿವಿ ದರ ಇಳಿಕೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಕೆಟಗರಿ 1 ರ ಅಡಿಗೆ ಸೇರಿಸಲಾಗಿದೆ.

ಹೀಗಾಗಿ. ಜೂನ್‌ 19 ರಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶದ ಅನ್ವಯ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಲಾಕ್‌ಡೌನ್ ಸಡಿಲಿಕೆಯನ್ನು ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮಾಡಲಾಗಿದೆ. ಈ ಅವಧಿಯಲ್ಲಿ ಎಲ್ಲ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ರಾಜ್ಯ ಸರ್ಕಾರದ ಆದೇಶವನ್ನು ಯಥಾವತ್ತಾಗಿ ಪಾಲಿಸಲಾಗುವುದು. ಈ ಆದೇಶವು ಶುಕ್ರವಾರ (ಜು.2)ದಿಂದ ಜಾರಿಗೆ ಬರಲಿದ್ದು, ಜು.5 ರ ಬೆಳಿಗ್ಗೆ 5 ಗಂಟೆಯವರೆಗೆ ಚಾಲ್ತಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ತಿಳಿಸಿದ್ದಾರೆ.

ವಾರಾಂತ್ಯ ಕರ್ಫ್ಯೂ ಮುಂದುವರಿಯಲಿದ್ದು, ಅಂದು ದಿನಸಿ ಅಂಗಡಿಗಳು, ಮಾಂಸ, ಮೀನು, ತರಕಾರಿ ಅಂಗಡಿಗಳು ಮಧ್ಯಾಹ್ನ 2ರವರೆಗೆ ತೆರೆಯಲು ಅನುಮತಿ ಎಂದು ಅವರು ಹೇಳಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: BC Suddi