Dailyhunt Logo
  • Light mode
    Follow system
    Dark mode
    • Play Story
    • App Story
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಕಲಬುರಗಿ : ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಂಡಳಿಯ ಉಪ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ಟ್ಯಾಟಿಸ್ಟಿಕಲ್ ಕೋ-ಆರ್ಡಿನೇಟರ್ -02 ಹುದ್ದೆ, ಸ್ಟ್ಯಾಟಿಸ್ಟಿಕಲ್ ಅಸಿಸ್ಟೆಂಟ್ -03 ಹುದ್ದೆ, ಅಕೌಂಟ್ ಅಸಿಸ್ಟಂಟ್ -01 ಹುದ್ದೆ, ಟೆಕ್ನಿಕಲ್ ಕೋ-ಆರ್ಡಿನೇಟರ್ -02 ಹುದ್ದೆಗಳು, ಟೆಕ್ನಿಕಲ್ ಅಸಿಸ್ಟೆಂಟ್ -01 ಹುದ್ದೆ, ಪ್ರೋಗ್ರಾಮರ್ ಅಕೌಂಟ್ ಅಸಿಸ್ಟಂಟ್ -03 ಹುದ್ದೆ, ಜೂನಿಯರ್ ಪ್ರೋಗ್ರಾಮರ್ -04 ಹುದ್ದೆ ಹಾಗೂ ಇನ್ಫಾರ್ಮೇಶನ್ ಟೆಕ್ನಾಲಜಿ ಅಸಿಸ್ಟಂಟ್ -10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಅರ್ಹ ಅಭ್ಯರ್ಥಿಗಳು ಮಂಡಳಿಯ www.hkrdb.kar.nic.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2023ರ ಫೆಬ್ರವರಿ 13 ರಿಂದ ಫೆಬ್ರವರಿ 20ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು. ಯಾವುದೇ ಭೌತಿಕವಾಗಿ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.ನೇಮಕಾತಿ ಅಧಿಸೂಚನೆ, ಮಾನದಂಡ, ವಿದ್ಯಾರ್ಹತೆ, ಅನುಭವ ಹಾಗೂ ಮಾಹೆಯಾನ ವೇತನ ಮತ್ತಿತರ ಹೆಚ್ಚಿನ ಮಾಹಿತಿಯನ್ನು ಮಂಡಳಿಯ ವೆಬ್ಸೈಟ್ನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ. ಅಭ್ಯರ್ಥಿಗಳು ತಮಗೆ ಯಾವುದೇ ಸಂದೇಹ, ಹಾಗೂ ಪ್ರಶ್ನೆಗಳಿದ್ದಲ್ಲಿ ಇದೇ ಫೆಬ್ರವರಿ 20ರೊಳಗಾಗಿ ಮಂಡಳಿಯ kkrdbpost@gmail.com ಇ-ಮೇಲ್ ವಿಳಾಸಕ್ಕೆ ಸಂಪರ್ಕಿಸಬೇಕೆಂದು ತಿಳಿಸಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: BC Suddi