Dailyhunt
ಕೋವಿಡ್ ಕಂಟಕ : ಇಂದು ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ

ಕೋವಿಡ್ ಕಂಟಕ : ಇಂದು ಉನ್ನತ ಮಟ್ಟದ ಸಭೆ ಕರೆದ ಪ್ರಧಾನಿ

ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆ ಅಬ್ಬರ ಜೋರಾಗಿದ್ದು ಆರೋಗ್ಯ ತುರ್ತುಪರಿಸ್ಥಿತಿ ಘೋಷಿಸುವ ಅನಿವಾರ್ಯತೆ ಎದುರಾಗಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಅಂಗವಾಗಿ ಇಂದು (ಶುಕ್ರವಾರ) ನಡೆಯಬೇಕಿದ್ದ ಪ್ರಚಾರ ಸಭೆಗಳನ್ನು ಪ್ರಧಾನಿ ನರೇಂದ್ರ ಮೋದಿ ರದ್ದುಪಡಿಸಿದ್ದಾರೆ.

ಬದಲಾಗಿದೆ ದೇಶದಲ್ಲಿನ ಕೋವಿಡ್-19 ಪರಿಸ್ಥಿತಿ ಕುರಿತು ಪರಿಶೀಲಿಸಲು ತಜ್ಞರು, ಅಧಿಕಾರಿಗಳೊಂದಿಗೆ ಉನ್ನತಮಟ್ಟದ ಸಭೆ ನಡೆಸಲಿದ್ದಾರೆ. 'ಕೋವಿಡ್-19 ಪರಿಸ್ಥಿತಿ ಕುರಿತು ಚರ್ಚಿಸಲು ಶುಕ್ರವಾರ ನಡೆಯಲಿರುವ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸುತ್ತಿರುವೆ. ಹೀಗಾಗಿ ನಾನು ಪಶ್ಚಿಮ ಬಂಗಾಳಕ್ಕೆ ಹೋಗುತ್ತಿಲ್ಲ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಗುರುವಾರ 3.14ಲಕ್ಷ ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 2 ಸಾವಿರಕ್ಕೂ ಹೆಚ್ಚು ಸೋಂಕಿತರು ಮೃತಪಟ್ಟಿದ್ದಾರೆ.

ಇಂದಿನ ಉನ್ನತ ಮಟ್ಟದ ಸಭೆಯ ಬಳಿಕ ಪ್ರಧಾನಿ ಎರಡನೇ ಬಾರಿಗೆ ದೇಶವನ್ನು ಉದ್ದೇಶಿಸಿ ಮಾತನಾಡುವ ಸಾಧ್ಯತೆ ಇದೆ. ಕಳೆದ ಬಾರಿ ಮಾತಿನಲ್ಲಿ ಲಾಕ್ ಡೌನ್ ಕಡೆಯ ಅಸ್ತ್ರ ಎಂದು ಹೇಳಿದ್ದರು. ಇದೀಗ ಸೋಂಕಿನ ಪ್ರಮಾಣ ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ಕಡೆಯ ಅಸ್ತ್ರ ಪ್ರಯೋಗಕ್ಕೆ ಮುಂದಾಗಲಿದ್ದಾರಾ ಎಂದು ಕಾದುನೋಡಬೇಕಿದೆ.

ದೇಶದಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಎದುರಾಗಿದೆ : ಕೇಂದ್ರಕ್ಕೆ ಸುಪ್ರೀಂ ನೋಟಿಸ್

Dailyhunt
Disclaimer: This content has not been generated, created or edited by Dailyhunt. Publisher: BC Suddi