Monday, 25 Jan, 9.30 am ಬಿಸಿ ಸುದ್ದಿ

ಹೋಂ
ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಿಸಿದ ಅಪಹರಣಕಾರರ ಬಂಧನಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಿಸಿದ ಅಪಹರಣಕಾರರ ಬಂಧನ

ಕೋಲಾರ: ಮಾಜಿ ಸಚಿವ ವರ್ತೂರ್ ಪ್ರಕಾಶ್ ಅಪಹರಣ ಪ್ರಕರಣಕ್ಕೆ ಸಂಬ0ಧಿಸಿದ0ತೆ ಪ್ರಮುಖ ಆರೋಪಿಯನ್ನು ಬಂಧಿಸಿದ ಪೊಲೀಸರು. ಈ ಪ್ರಕರಣದಲ್ಲಿ ಇದುವರೆಗೂ 6 ಆರೋಪಿಗಳನ್ನು ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಪಹರಣ ಪ್ರಕರಣ ಬೆಳಕಿಗೆ ಬಂದ ನಂತರ ತಲೆಮರೆಸಿಕೊಂಡಿದ್ದ ಆರೋಪಿ ರೋಹಿತ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರೋಪಿ ಎ1 ಆಗಿದ್ದಾನೆ. ತಮಿಳುನಾಡಿನ ಹೊಸೂರಿನಿಂದ ಆರೋಪಿ ತಪ್ಪಿಸಿಕೊಂಡಿದ್ದ. ಈಗ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಬೆಂಗಳೂರು ನಗರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ರೋಹಿತ್‌ನನ್ನು ಬಂಧಿಸಿದ್ದಾರೆ. ಅಪಹರಣ ಪ್ರಕರಣಕ್ಕೆ ಸಂಬ0ಧಿಸಿದ0ತೆ ಇದುವರೆಗೂ 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ತನಿಖೆ ಮುಂದುವರೆದಿದೆ.
2020ರ ನವೆಂಬರ್ 26 ರಂದು ಕೋಲಾರದ ಬೆಗ್ಲಿಹೊಸಹಳ್ಳಿ ತೋಟದ ಮನೆಯ ಬಳಿಯಿಂದ ವರ್ತೂರು ಪ್ರಕಾಶ್ ಅಪಹರಣ ಮಾಡಲಾಗಿತ್ತು. ಡಿಸೆಂಬರ್ 3ರಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬೆಂಗಳೂರು, ತಮಿಳುನಾಡು ಸೇರಿದಂತೆ ವಿವಿಧ ಕಡೆ ಕವಿರಾಜ್ ವಿರುದ್ಧ 10 ಅಪಹರಣ ಪ್ರಕರಣ ದಾಖಲಾಗಿದೆ. ವರ್ತೂರು ಪ್ರಕಾಶ್ ಅಪಹರಣ ಮಾಡಿದರೆ ಕೋಟಿ ಕೋಟಿ ಹಣ ಸಿಗುತ್ತದೆ ಎಂದು ಅವರನ್ನು ಅಪಹರಣ ಮಾಡಿರಬಹುದು ಎಂಬ ಶಂಕೆ ಇದ್ದು, ತನಿಖೆ ನಡೆಯುತ್ತಿದೆ.

ಕೋಲಾರ ಜಿಲ್ಲೆಯಲ್ಲಿರುವ ತಮ್ಮ ಫಾರ್ಮ್ ಹೌಸ್‌ನಿಂದ ಮದುವೆ ಕಾರ್ಯಕ್ರಮವೊಂದಕ್ಕೆ ಹೋಗಲು ವರ್ತೂರು ಪ್ರಕಾಶ್ ಹೊರಟಿದ್ದರು. ತೋಟದ ಮನೆಯಿಂದ ಅರ್ಧ ಕಿ. ಮೀ. ಸಾಗುವ ವೇಳೆಗೆ ಮುಂದೆ ಮತ್ತು ಹಿಂದೆ ಒಂದೊ0ದು ಕಾರಿನಲ್ಲಿ ಹಿಂಬಾಲಿಸಿದ್ದ ದುಷ್ಕರ್ಮಿಗಳು ಅವರನ್ನು ಅಪಹರಣ ಮಾಡಿದ್ದರು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: BC Suddi
Top