Dailyhunt Logo
  • Light mode
    Follow system
    Dark mode
    • Play Story
    • App Story
ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ಜಿಲ್ಲೆಯ ಪದವಿ ಪೂರ್ವ ಹಾಗೂ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಮತ್ತು ಭಾವನಾತ್ಮಕ ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ನೀಡಲು ಜಿಲ್ಲೆಯ ಆರು ಬ್ಲಾಕ್‍ಗಳ ಸಂಪನ್ಮೂಲ ಕೇಂದ್ರಗಳಿಗೆ ಒಬ್ಬರಂತೆ 'ಮಾನಸಿಕ ಆರೋಗ್ಯ ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ' ಯನ್ನು ಸಮಾಲೋಚಕ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮನೋವಿಜ್ಞಾನ, ಕ್ಲಿನಕಲ್ ಮನೋವಿಜ್ಞಾನ, ಕೌನ್ಸೆಲಿಂಗ್ ಮನೋವಿಜ್ಞಾನ ವಿಷಯದಲ್ಲಿ ಎಂ.ಎ/ಎಂ.ಎಸ್ಸಿ ಪದವಿ ಪಡೆದಿದ್ದು, ಶಾಲೆ ಅಥವಾ ಸಮುದಾಯ ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ಕನಿಷ್ಠ 1 ವರ್ಷದ ಸೇವಾ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಜೊತೆಗೆ ಕನ್ನಡ, ಇಂಗ್ಲಿಷ್ ಹಾಗೂ ಮೂಲಭೂತ ಕಂಪ್ಯೂಟರ್ ಜ್ಞಾನ ಹೊಂದಿರುವುದು ಕಡ್ಡಾಯ.

ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ಮತ್ತು ಅಗತ್ಯ ದೃಢೀಕೃತ ದಾಖಲೆಗಳೊಂದಿಗೆ 2026ರ ಸೆಪ್ಟೆಂಬರ್ 03 ಸಂಜೆ 5 ಗಂಟೆಯೊಳಗೆ 'ಉಪನಿರ್ದೇಶಕರು (ಆಡಳಿತ) ಹಾಗೂ ಪದನಿಮಿತ್ತ ಜಿಲ್ಲಾ ಯೋಜನಾಧಿಕಾರಿಗಳ ಕಚೇರಿ, ಸಮಗ್ರ ಶಿಕ್ಷಣ ಕರ್ನಾಟಕ, ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ'ಇಲ್ಲಿಗೆ ಖುದ್ದಾಗಿ ಸಲ್ಲಿಸಬೇಕಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ..

Dailyhunt
Disclaimer: This content has not been generated, created or edited by Dailyhunt. Publisher: BC Suddi