Friday, 05 Mar, 3.00 pm ಬಿಸಿ ಸುದ್ದಿ

ಹೋಂ
ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದೆ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು : ಪ್ರತಿ ವಹಿವಾಟುಗಳಿಗೂ ಪ್ಲಾಸ್ಟಿಕ್ ಅನಿವಾರ್ಯವಾಗಿದೆ. ಆದರಿಂದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಮೈಸೂರು ಮಹಾನಗರ ಪಾಲಿಕೆ ಹಾಗೂ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಏಪ್ರಿಲ್ 5 ರಿಂದ ಪ್ಲಾಸ್ಟಿಕ್ ಬಳಸಿದರೆ ಕಡ್ಡಾಯವಾಗಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಪ್ಲಾಸ್ಟಿಕ್ ಬಳಸಲು ಅವಕಾಶ ನೀಡದೇ ಏಕಾಏಕಿ ದಾಳಿ ಮಾಡಿದರೆ ವ್ಯಾಪಾರಿಗಳಿಗೆ ಮತ್ತು ಗ್ರಾಹಕರಿಗೆ ಇಬ್ಬರಿಗೂ ತೊಂದರೆಯಾಗುತ್ತದೆ. ಆದ್ದರಿಂದ ಒಂದು ತಿಂಗಳ ಗಡುವು ನೀಡಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: BC Suddi
Top