Dailyhunt Logo
  • Light mode
    Follow system
    Dark mode
    • Play Story
    • App Story
'ರಾಜ್ಯದಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಜಾನುವಾರುಗಳಿಗೆ ಲಸಿಕೆ' - ಸಚಿವ ಪ್ರಭು ಚವ್ಹಾಣ್

'ರಾಜ್ಯದಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಜಾನುವಾರುಗಳಿಗೆ ಲಸಿಕೆ' - ಸಚಿವ ಪ್ರಭು ಚವ್ಹಾಣ್

ಬೆಂಗಳೂರು: ಕರ್ನಾಟಕದಲ್ಲಿ ಪಲ್ಸ್ ಪೋಲಿಯೋ ಮಾದರಿಯಲ್ಲಿ ಕಾಲುಬಾಯಿ ರೋಗಕ್ಕೆ ವ್ಯವಸ್ಥಿತ ಲಸಿಕಾ ಅಭಿಯಾನ ನಡೆಸಲಾಗುವುದು ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರು ಗಮನಿಸ ಬೇಕಾದ ಸುದ್ದಿ.!

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ 78 ತಾಲೂಕುಗಳ 419 ಹಳ್ಳಿಗಳಲ್ಲಿ ಕಾಲುಬಾಯಿ ರೋಗ 4,475 ಜಾನುವಾರುಗಳಲ್ಲಿ ಕಂಡುಬಂದಿರುತ್ತದೆ.

ಉಳಿದ ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖ ಆಗಿರುತ್ತವೆ. ಪಶುಸಂಗೋಪನೆ ಇಲಾಖೆಯ ವೈದ್ಯಾಧಿಕಾರಿಗಳು ನಿರಂತರವಾಗಿ ರೋಗ ಕಂಡುಬಂದ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ತೀವ್ರವಾಗಿ ನಿಗಾ ವಹಿಸಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ 57 ಹಸುಗಳು ಇಲ್ಲಿಯವರೆಗೆ ಮೃತಪಟ್ಟಿದ್ದು, 4066 ಜಾನುವಾರುಗಳು ಚಿಕಿತ್ಸೆಯಿಂದ ಗುಣಮುಖವಾಗಿವೆ ಎಂದು ಹೇಳಿದ್ದಾರೆ.

Post navigation

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವ ಭಕ್ತರು ಗಮನಿಸ ಬೇಕಾದ ಸುದ್ದಿ.! ಕೋವಿಡ್ ದೃಢಪಟ್ಟ ಒಂದು ತಿಂಗಳ ಒಳಗೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೂ ಪರಿಹಾರ - ಕೇಂದ್ರ
Dailyhunt
Disclaimer: This content has not been generated, created or edited by Dailyhunt. Publisher: BC Suddi